Sonu Sood Scholarship: ಬಡ ಮಕ್ಕಳ ಉನ್ನತ ಶಿಕ್ಷಣಕ್ಕೆ ಪೂರ್ಣ ಪ್ರಮಾಣದ ವಿದ್ಯಾರ್ಥಿವೇತನ ಘೋಷಿಸಿದ ಸೋನು ಸೂದ್

ರಾಜ್ಯದಲ್ಲಿ ಕೊರೋನಾ ಸಂಕಷ್ಟದ ನಡುವೆ ಅನೇಕರ ಬದುಕಿಗೆ ನೆರವಾಗುತ್ತಿರುವ ಬಾಲಿವುಡ್ ನಟ ಸೋನು ಸೂದ್ ಇದೀಗ ದೇಶದ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.

 

ಬಡ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ತೊಂದರೆಯಾಗದಿರಲು ಸೋನು ಸೂದ್ ವಿದ್ಯಾರ್ಥಿವೇತನ ಘೋಷಣೆ

ಉನ್ನತ ಶಿಕ್ಷಣ ಪಡೆಯಲು ಬಯಸುವ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತಮ್ಮ ತಾಯಿಯ ಹೆಸರಿನಲ್ಲಿ ಸ್ಕಾಲರ್ ಶಿಪ್ ನೀಡುವುದಾಗಿ ಘೋಷಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದಾರೆ.

"ಗುರಿ ಸಾಧಿಸಲು ಬಯಸುವ ವಿದ್ಯಾರ್ಥಿಗಳಿಗೆ ಆರ್ಥಿಕ ಸಮಸ್ಯೆ ತಡೆಯಾಗಬಾರದು" ಹಾಗಾಗಿ ಬಡ ವಿದ್ಯಾರ್ಥಿಗಳಿಗೆ ಶಾಲೆಯ ನಂತರ ಶಿಕ್ಷಣಕ್ಕೆ ಪೂರ್ಣ ಪ್ರಮಾಣದ ವಿದ್ಯಾರ್ಥಿವೇತನವನ್ನು ಘೋಷಿಸುತ್ತಿದ್ದೇನೆ. ಎಲ್ಲರೂ ಓದಿ ವಿದ್ಯಾವಂತರಾಗಬೇಕು ಹಾಗೂ ತಮ್ಮ ಗುರಿಯನ್ನು ಮುಟ್ಟಬೇಕು. ಬಡ ವಿದ್ಯಾರ್ಥಿಗಳು scholarships@soonusood.me ನಲ್ಲಿ ನಮೂದಿಸಿಕೊಳ್ಳಿ. ಖಂಡಿತ ನಾನು ಸಹಾಯ ಮಾಡುತ್ತೇನೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಸೋನು ಸೂದ್ ತಮ್ಮ ದಿವಂಗತ ತಾಯಿ ಪ್ರೊ.ಸರೋಜ್ ಸೂದ್ ಅವರ ಹೆಸರಿನಲ್ಲಿ ವಿದ್ಯಾರ್ಥಿವೇತನ ನೀಡಲು ಮುಂದಾಗಿದ್ದಾರೆ. ವಾರ್ಷಿಕ ಆದಾಯ 2 ಲಕ್ಷಕ್ಕೂ ಕಡಿಮೆ ಇರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹರಾಗಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Soonu sood announces full scholarship for higher education of poor students.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X