ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇಲ್ಲಿ ಖಾಲಿ ಇರುವ ಬಿ ಮತ್ತು ಸಿ ದರ್ಜೆಯ ಒಟ್ಟು 232ವಿವಿಧ ಮಿಕ್ಕುಳಿದ ವೃಂದದ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾರ್ಚ್ 20 ರಿಂದ ಮಾರ್ಚ್ 23 ರ ವರೆಗೆ ಪರೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ಪರೀಕ್ಷಾ ಸರಿ ಉತ್ತರಗಳನ್ನು (ಕೀ ಉತ್ತರ) ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟ ಮಾಡಲಾಗಿದೆ.
ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ http://kea.kar.nic.in/ ವಿಳಾಸಕ್ಕೆ ಭೇಟಿ ನೀಡಿ ಕೀ ಉತ್ತರಗಳನ್ನು ವೀಕ್ಷಿಸ ಬಹುದಾಗಿದೆ. ವಿಷಯವಾರು ಸರಿ ಉತ್ತರಗಳನ್ನು ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಾತ್ಕಾಲಿಕ ಸರಿ ಉತ್ತರಗಳನ್ನು ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆ ಸಂಖ್ಯೆಗೆ ಅನುಗುಣವಾಗಿ ಪರಿಶೀಲಿಸಲು ಸೂಚಿಸಿದೆ. ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಏನಾದರು ಆಕ್ಷೇಪಣೆಗಳಿದ್ದಲ್ಲಿ ಏಪ್ರಿಲ್ 12,2019ರ ಸಂಜೆ 5:30ರೊಳಗೆ ನಿಮ್ಮಆಕ್ಷೇಪಣೆ ಅನ್ನು ನೀಡಲಾಗಿರುವ ಲಿಂಕ್ ಮೂಲಕ ಸಲ್ಲಿಸಬಹುದು.
ಕೀ ಉತ್ತರಗಳನ್ನು ಪಡೆಯುವ ವಿಧಾನ:
* ಅಭ್ಯರ್ಥಿಗಳು ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ http://kea.kar.nic.in/ ಗೆ ಭೇಟಿ ನೀಡಿ
* ನಂತರ Recruitment ಗೆ ಹೋಗಿ ಅಲ್ಲಿ ಕಾಣಿಸುವ BWSSB ಮೇಲೆ ಕ್ಲಿಕ್ ಮಾಡಿ.
* ಅಲ್ಲಿ ನೀಡಲಾಗಿರುವ ಕೀ-ಉತ್ತರಗಳನ್ನು ವೀಕ್ಷಿಸಿ
* ಅಭ್ಯರ್ಥಿಗಳು ಆಕ್ಷೇಪಣೆಗಳಿದ್ದಲ್ಲಿ Online Object Line ಲಿಂಕ್ ಮೇಲೆ ಕ್ಲಿಕ್ ಮಾಡಿ
* ನಂತರ ನಿಮ್ಮ ಸಿಇಟಿ ನಂಬರ್ ಮತ್ತು ಜನ್ಮ ದಿನಾಂಕ ನೀಡಿ ನಿಮ್ಮ ಆಕ್ಷೇಪಣೆ ಸಲ್ಲಿಸಿ
ಪ್ರಕಟಿಸಿರುವ ತಾತ್ಕಾಲಿಕ ಸರಿ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಆಧಾರ ಸಹಿತ ಆಕ್ಷೇಪಣೆಗಳನ್ನು ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಹೋಗಿ ಏಪ್ರಿಲ್ 12,2019ರ ಸಂಜೆ 5:30 ರೊಳಗೆ ಸಲ್ಲಿಸಬಹುದಾಗಿರುತ್ತದೆ.
ಪರೀಕ್ಷೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು ಕೀ ಉತ್ತರವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ