ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ)ಯ 12ನೇ ತರಗತಿ ಫಲಿತಾಂಶ ಇಂದು ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.

ಈ ಭಾರಿ ಒಟ್ಟಾರೆ ಶೇಕಡಾ 88.78ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಳೆದ ವರ್ಷಕ್ಕಿಂತ ಶೇ.5.38ರಷ್ಟು ಉತ್ತಮ ಫಲಿತಾಂಶ ಹೆಚ್ಚಾಗಿದೆ. ಕಳೆದ ವರ್ಷ ಒಟ್ಟಾರೆ ಫಲಿತಾಂಶ ಶೇಕಡಾ 83.40ರಷ್ಟಾಗಿತ್ತು. ಎಂದಿನಂತೆ ಈ ವರ್ಷವೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಶೇ.91.15ರಷ್ಟು ಫಲಿತಾಂಶ ಬಂದಿದೆ.
ಪ್ರಸಕ್ತ ಸಾಲಿನಲ್ಲಿ 12 ಲಕ್ಷದ 03 ಸಾವಿರದ 595 ಮಂದಿ ಪರೀಕ್ಷೆಗೆ ದಾಖಲಾತಿ ಪಡೆದುಕೊಂಡು 11 ಲಕ್ಷದ 92 ಸಾವಿರದ 961 ಮಂದಿ ಪರೀಕ್ಷೆಗೆ ಹಾಜರಾಗಿದ್ದರು.
For Daily Alerts