ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ನೇಮಕಾತಿಯ ಶೀಘ್ರಲಿಪಿಗಾರ, ಕಿರಿಯ ಮತ್ತು ಹಿರಿಯ ಸಹಾಯಕ ಹುದ್ದೆಗಳ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳ ಮೆರಿಟ್ ಲೀಸ್ಟ್ ಅನ್ನು ಕೂಡ ಬಿಡುಗಡೆ ಮಾಡಲಾಗಿದೆ.

ಸಿಬಿಎಸ್ಇ 204 ಕಿರಿಯ ಸಹಾಯಕ, 60 ಹಿರಿಯ ಸಹಾಯಕ ಮತ್ತು 25 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆಯನ್ನು ಹೊರಡಿಸಿತ್ತು.
ಸಿಬಿಎಸ್ಇ ನೇಮಕಾತಿಯ ಹಿರಿಯ ಸಹಾಯಕರು ಹುದ್ದೆಗಳಿಗೆ ಜನವರಿ 30,2020ರಂದು ಹಾಗೂ ಶೀಘ್ರಲಿಪಿಗಾರ ಹುದ್ದೆಗಳಿಗೆ ಜನವರಿ 31,2020ರಂದು ಮತ್ತು ಕಿರಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಜನವರಿ 29 ಮತ್ತು ಜನವರಿ 30,2020ರಂದು ಪರೀಕ್ಷೆಯನ್ನು ನಡೆಸಲಾಗಿತ್ತು.
ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ ಹಂತದ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಮುಂದಿನ ಹಂತದ ಕೌಶಲ್ಯ ಪರೀಕ್ಷೆಯ ದಿನಾಂಕಗಳನ್ನು ಅಧಿಕೃತ ವೆಬ್‌ಸೈಟ್ ನಲ್ಲಿ ಅತೀ ಶೀಘ್ರದಲ್ಲಿ ಪ್ರಕಟಿಸಲಾಗುತ್ತದೆ.
ಅಭ್ಯರ್ಥಿಗಳು ಮೆರಿಟ್ ಲೀಸ್ಟ್ ಅನ್ನು ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











