ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 2021ನೇ ಸಾಲಿನ 10 ಮತ್ತು 12ನೇ ತರಗತಿಯ ಪರೀಕ್ಷಾ ವೇಳಾಪಟ್ಟಿಯನ್ನು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಹ್ರಿಯಾಲ್ ನಿಶಾಂಖ್ ಅವರು ಇಂದು ಪ್ರಕಟಿಸಿದ್ದಾರೆ.
ಸಿಬಿಎಸ್ಇ 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳು ಮೇ 4 ರಿಂದ ಆರಂಭವಾಗಲಿದ್ದು ಜೂನ್ 10ಕ್ಕೆ ಮುಕ್ತಾಯವಾಗಲಿದೆ ಎಂದು ತಿಳಿಸಿದ್ದಾರೆ.
ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳು ಆಫ್ಲೈನ್ ನಲ್ಲಿ ನಡೆಯಲಿದ್ದು, ಫಲಿತಾಂಶವನ್ನು ಜುಲೈ 15ರೊಳಗೆ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.
10 ಮತ್ತು 12ನೇ ತರಗತಿ ವಿದ್ಯಾರ್ಥಿಗಳ ಪ್ರಾಯೋಗಿಕ, ಇಂಟರ್ ನಲ್ ಅಸೆಸ್ಮೆಂಟ್ ಗಳನ್ನು ಮಾರ್ಚ್ 1 ರಿಂದ ನಡೆಸಬಹುದಾಗಿದೆ. ಈ ಕುರಿತು ಅತೀ ಶೀಘ್ರದಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.
ಕೊರೋನಾ ಕಾರಣದಿಂದಾಗಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಹಾನಿಯಾಗಿದ್ದು ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಆನ್ಲೈನ್ ಶಿಕ್ಷಣ ಮುಂದುವರಿಸಿರುವುದು ಶ್ಲಾಘನೀಯ ಎಂದು ಸಚಿವರು ಹೇಳಿದ್ದಾರೆ.
For Quick Alerts
For Daily Alerts