ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಸಿಬಿಎಸ್ಇ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಸಿಬಿಎಸ್ಇ ಒಟ್ಟು 357 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಯ್ಕೆ ಮಾಡಲಿದ್ದು, ಇದೀಗ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.
ಸಿಬಿಎಸ್ಇ ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ಸೈಟ್ http://cbse.nic.in/ ಗೆ ಭೇಟಿ ನೀಡಿ
ಸ್ಟೆಪ್ 2: ನಂತರ ಫಲಿತಾಂಶ ಪ್ರಕಟ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಫಲಿತಾಂಶವನ್ನು ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ