CBSE Class 10 And 12 Result 2022 : ಸಿಬಿಎಸ್ಇ ಬೋರ್ಡ್ ಪರೀಕ್ಷಾ ಫಲಿತಾಂಶ ಜುಲೈ ತಿಂಗಳ ಅಂತ್ಯಕ್ಕೆ ಪ್ರಕಟ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 10 ಮತ್ತು 12 ನೇ ತರಗತಿಯ 2022ರ ಪರೀಕ್ಷೆಯ ಫಲಿತಾಂಶವನ್ನು ಜುಲೈ ಕೊನೆಯ ವಾರದಲ್ಲಿ ಪ್ರಕಟಿಸಲಿದೆ ಎಂದು ಮಂಡಳಿಯು ಹೇಳಿದೆ. ಫಲಿತಾಂಶ ಪ್ರಕಟವಾದ ಬಳಿಕ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ cbseresults.nic.in, results.gov.in ಗೆ ಭೇಟಿ ನೀಡಿ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಸಿಬಿಎಸ್ಇ 10 ಮತ್ತು 12ನೇ ತರಗತಿ ಫಲಿತಾಂಶ ಜುಲೈ ತಿಂಗಳ ಅಂತ್ಯಕ್ಕೆ ಪ್ರಕಟ

ಈ ವರ್ಷ ಸಿಬಿಎಸ್‌ಇ 10 ಮತ್ತು 12ನೇ ತರಗತಿಯ ಅವಧಿ 2ರ ಪರೀಕ್ಷೆಗಳಲ್ಲಿ ಒಟ್ಟು 35 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳು ಪ್ರತಿ ಪತ್ರಿಕೆಯಲ್ಲಿ ಮತ್ತು ಒಟ್ಟಾರೆಯಾಗಿ ಕನಿಷ್ಠ 30 ಶೇಕಡಾ ಅಂಕಗಳನ್ನು ಪಡೆಯಬೇಕು.

ಸಿಬಿಎಸ್ಇ 10 ಮತ್ತು 12 ನೇ ತರಗತಿಯ ಫಲಿತಾಂಶಗಳು ಒಮ್ಮೆ ಬಿಡುಗಡೆಯಾದ ನಂತರ ಅಧಿಕೃತ ವೆಬ್‌ಸೈಟ್‌ cbseresults.nic.in, results.gov.in ಗಳಲ್ಲಿ ಲಭ್ಯವಿರುತ್ತವೆ. ಸ್ಕೋರ್‌ಕಾರ್ಡ್ ಡೌನ್‌ಲೋಡ್ ಮಾಡಲು ಅಭ್ಯರ್ಥಿಗಳು ನಿಮ್ಮ ರೋಲ್ ನಂಬರ್, ಜನ್ಮ ದಿನಾಂಕವನ್ನು ಬಳಸಿ ಡೌನ್‌ಲೋಡ್ ಮಾಡಿಕೊಳ್ಳಬಹುದು.

CBSE ಟರ್ಮ್ 2 ಫಲಿತಾಂಶವು 2022ರ ಟರ್ಮ್ 1 ಮತ್ತು ಟರ್ಮ್ 2 ಪರೀಕ್ಷೆಗಳಲ್ಲಿನ ಒಟ್ಟಾರೆ ಕಾರ್ಯಕ್ಷಮತೆಯನ್ನು ಒಳಗೊಂಡಿರುತ್ತದೆ. CBSE ಅಂತಿಮ ಅಂಕಪಟ್ಟಿಯನ್ನು ಟರ್ಮ್ 1 ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳಿಗೆ ಶೇಕಡಾ 30 ರಷ್ಟು ಮತ್ತು 2 ನೇ ಅವಧಿಯ ಪರೀಕ್ಷೆಯಲ್ಲಿ ಶೇಕಡಾ 70 ರಷ್ಟು ತೂಕವನ್ನು ಒದಗಿಸುವ ಮೂಲಕ ಸಿದ್ಧಪಡಿಸಲಾಗುತ್ತದೆ.

ಅವಧಿ 1ರ ಫಲಿತಾಂಶದ ಸಮಯದಲ್ಲಿ ಮಂಡಳಿಯು ಫಲಿತಾಂಶದ ಹಾಳೆಗಳನ್ನು ಶಾಲೆಗಳಿಗೆ ಕಳುಹಿಸುತ್ತದೆ ಮತ್ತು ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಗಳನ್ನು ಆಯಾ ಶಾಲೆಗಳಿಂದ ಸಂಗ್ರಹಿಸುತ್ತಾರೆ. ಅಧಿಕೃತ ವೆಬ್‌ಸೈಟ್‌ಗಳ ಹೊರತಾಗಿ ವಿದ್ಯಾರ್ಥಿಗಳು ಡಿಜಿಲಾಕರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್-digilocker.gov.in ನಲ್ಲಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಬಹುದು.

ಸಿಬಿಎಸ್ಇ 10 ಮತ್ತು 12ನೇ ತರಗತಿ ಫಲಿತಾಂಶ ಜುಲೈ ತಿಂಗಳ ಅಂತ್ಯಕ್ಕೆ ಪ್ರಕಟ

CBSE ಫಲಿತಾಂಶ 2022: ಸ್ಕೋರ್ ಕಾರ್ಡ್ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1. ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ cbse.gov.in, cbseresults.nic.in ಗೆ ಭೇಟಿ ನೀಡಿ

ಸ್ಟೆಪ್ 2. ಹೋಂ ಪೇಜ್ ನಲ್ಲಿ ಲಭ್ಯವಿರುವ CBSE ಫಲಿತಾಂಶ 2022 ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ನಮೂದಿಸಿ

ಸ್ಟೆಪ್ 4. CBSE 2022 ಫಲಿತಾಂಶ ಸ್ಕ್ರೀನ್‌ ಮೇಲೆ ಮೂಡುವುದು, ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

For Quick Alerts
ALLOW NOTIFICATIONS  
For Daily Alerts

English summary
CBSE class 10 and 12 term 2 results to be release in last week of july.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X