CBSE Class 12 Board Exam: ವಿದ್ಯಾರ್ಥಿಗಳ ಹಿತೃದೃಷ್ಟಿಯಿಂದ ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದು; ಮೋದಿ ಘೋಷಣೆ

ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದು

ಕೊರೋನಾ ಎರಡನೇ ಅಲೆಯಿಂದಾಗಿ ದೇಶದೆಲ್ಲೆಡೆ ಆತಂಕ ಮನೆಮಾಡಿದ್ದು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ 2021ನೇ ಸಾಲಿನ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಸಂಜೆ ನಡೆದ ಸಭೆಯಲ್ಲಿ 12ನೇ ತರಗತಿ ಪರೀಕ್ಷೆ ರದ್ದು ಕುರಿತಂತೆ ಅಧಿಕಾರಿಗಳಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿ ನಂತರ ಈ ವರ್ಷ ಪರೀಕ್ಷೆ ನಡೆಸದಿರಲು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ದೇಶದಲ್ಲಿ ಕೋವಿಡ್ ಹೆಚ್ಚು ಹೆಚ್ಚು ಆತಂಕವನ್ನು ಸೃಷ್ಟಿಸುತ್ತಿದೆ, ಸದ್ಯದ ಪರಿಸ್ಥಿತಿಯಲ್ಲಿ ಪೋಷಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಆತಂಕಗೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳನ್ನು ಬಲವಂತವಾಗಿ ಪರೀಕ್ಷೆಗೆ ಕಳುಹಿಸುವುದು ಸೂಕ್ತವಲ್ಲ ಎಂದು ಪ್ರಧಾನಿ ಹೇಳಿದ್ದಾರೆ.

ಕಳೆದ ವರ್ಷದಂತೆಯೇ ಈ ವರ್ಷವೂ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ತೆಗೆದುಕೊಳ್ಳಲು ಇಚ್ಛಿಸಿದ್ದಲ್ಲಿ, ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ಸಿಬಿಎಸ್ಇ ಇಂತಹ ಆಯ್ಕೆಯನ್ನು ಸಹ ಪರಿಗಣಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ "ಭಾರತ ಸರ್ಕಾರವು ಸಿಬಿಎಸ್ಇ 12ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ. ವ್ಯಾಪಕ ಸಮಾಲೋಚನೆಯ ನಂತರ, ನಾವು ವಿದ್ಯಾರ್ಥಿ-ಸ್ನೇಹಿಯಾಗಿರುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ವಿದ್ಯಾರ್ಥಿಗಳ ಆರೋಗ್ಯ ಮತ್ತು ಯುವ ಭವಿಷ್ಯ ಕಾಪಾಡುವುದು ಇದರ ಉದ್ದೇಶವಾಗಿದೆ" ಎಂದಿದ್ದಾರೆ.

ಮೌಲ್ಯಮಾಪನ ಹೇಗೆ ನಡೆಯಲಿದೆ ?:

ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದಾಗಿರುವ ಹಿನ್ನಲೆಯಲ್ಲಿ ಬಹುತೇಕ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮೌಲ್ಯ ಮಾಪನ ಹೇಗೆ ನಡೆಯಲಿದೆ ಎಂಬ ಅನುಮಾನವಿದೆ. ಈ ಕುರಿತು ಅಧಿಕಾರಿಗಳು ಈ ವರ್ಷ 12ನೇ ತರಗತಿ ಬೋರ್ಡ್​ ಪರೀಕ್ಷೆ ನಡೆಯುವುದಿಲ್ಲ, ಸಿಬಿಎಸ್​ಸಿ ಈ ವಸ್ತು ನಿಷ್ಟ ಮಾನದಂಡದ ಪ್ರಕಾರ ವಿದ್ಯಾರ್ಥಿಗಳ ಫಲಿತಾಂಶವನ್ನು ಕ್ರೋಢಿಕರಿಸಿ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ವಿದ್ಯಾರ್ಥಿಗಳ ಮೂರು ವರ್ಷದ ಸಾಧನೆ ಸಂಗ್ರಹಿಸುವಂತೆ ಸೂಚಿಸಲಾಗಿದೆ. ವಿದ್ಯಾರ್ಥಿಗಳು 9, 10, 11ನೇ ತರಗತಿಯ ಬೋರ್ಡ್​ ಪರೀಕ್ಷೆ ವೇಳೆ ಪಡೆದ ಅಂಕಗಳ ಸಂಬಂಧಿಸಿದಂತೆ ಈಗಾಗಲೇ ವಿವರಗಳನ್ನು ನೀಡುವಂತೆ ಶಾಲೆಗಳಿಗೆ ಕೋರಲಾಗಿದೆ. ಈ ಮೂರು ವರ್ಷಗಳಲ್ಲಿ ವಿದ್ಯಾರ್ಥಿಗಳೂ ತೋರಿದ ಸಾಧನೆ ಆಧಾರದ ಮೇಲೆ ಸಿಬಿಎಸ್‌ಇ 12ನೇ ತರಗತಿಯ ಫಲಿತಾಂಶವನ್ನು ಲೆಕ್ಕಾಹಾಕುವ ಸಾಧ್ಯತೆ ಇದೆ.

For Quick Alerts
ALLOW NOTIFICATIONS  
For Daily Alerts

English summary
The government has decided against holding class 12 board exams. It has been decided that Class XII Board Exams would not be held this year.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X