CBSE 12ನೇ ತರಗತಿ ಕಂಪಾರ್ಟ್ಮೆಂಟ್ ಫಲಿತಾಂಶ 2022: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE)12 ನೇ ತರಗತಿಯ ಕಂಪಾರ್ಮ್ಟೆಂಟ್ ಪರೀಕ್ಷೆಯ ಫಲಿತಾಂಶವನ್ನು ಈ ತಿಂಗಳು ಪ್ರಕಟಿಸುವ ಸಾಧ್ಯತೆಯಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಫಲಿತಾಂಶ ಪ್ರಕಟವಾದ ಬಳಿಕ ವೀಕ್ಷಿಸಬಹುದು.

ವಿದ್ಯಾರ್ಥಿಗಳು ತಮ್ಮ ಕಂಪಾರ್ಟ್ಮೆಂಟ್ ಪರೀಕ್ಷೆಯ ಅಂಕಪಟ್ಟಿಯನ್ನು cbse.gov.in, cbseresults.nic.in ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಸಿಬಿಎಸ್ 12ನೇ ತರಗತಿಯ ಕಂಪಾರ್ಟ್ಮೆಂಟ್ ಪರೀಕ್ಷೆಯನ್ನು ಈ ಹಿಂದೆ ಆಗಸ್ಟ್ 23 ರಂದು ನಡೆಸಲಾಯಿತು, ತಮ್ಮ ಅಂಕಗಳನ್ನು ಸುಧಾರಿಸಲು ಬಯಸುವ ಅಭ್ಯರ್ಥಿಗಳು ಕಂಪಾರ್ಟ್‌ಮೆಂಟ್ ಪರೀಕ್ಷೆಗೆ ಹಾಜರಾಗಿದ್ದರು.
CBSE 12ನೇ ತರಗತಿ ಕಂಪಾರ್ಟ್ಮೆಂಟ್ ಫಲಿತಾಂಶ 2022 ಅನ್ನು ವೀಕ್ಷಿಸುವುದು ಹೇಗೆ ?:
CBSE 12ನೇ ತರಗತಿಯ ಕಂಪಾರ್ಟ್ಮೆಂಟ್ ಫಲಿತಾಂಶವು ಅಧಿಕೃತ ವೆಬ್‌ಸೈಟ್-cbse.gov.in ನಲ್ಲಿ ಲಭ್ಯವಿರುತ್ತದೆ. ಅಭ್ಯರ್ಥಿಗಳು ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ, ನಂತರ ನಿಮ್ಮ ರೋಲ್ ಸಂಖ್ಯೆ, ಶಾಲೆಯ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ. ನಂತರ CBSE ತರಗತಿ 12ರ ಫಲಿತಾಂಶವು ಪರದೆಯ ಮೇಲೆ ಗೋಚರಿಸುತ್ತದೆ. ಅಭ್ಯರ್ಥಿಗಳು ಸ್ಕೋರ್‌ಕಾರ್ಡ್ ಅನ್ನು ಡೌನ್‌ಲೋಡ್ ಮಾಡಿ ಮತ್ತು ಹೆಚ್ಚಿನ ಉಲ್ಲೇಖಕ್ಕಾಗಿ ಪ್ರಿಂಟ್ ಔಟ್ ಅನ್ನು ತೆಗೆದುಕೊಳ್ಳಿ.
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಜುಲೈ 22 ರಂದು 12 ನೇ ತರಗತಿಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿತು, ಒಟ್ಟು 92.71 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. 12ನೇ ತರಗತಿ ಪರೀಕ್ಷೆಯಲ್ಲಿ 33 ಸಾವಿರ (33,423) ವಿದ್ಯಾರ್ಥಿಗಳು ಶೇಕಡಾ 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ, 1.34 ಲಕ್ಷ ವಿದ್ಯಾರ್ಥಿಗಳು ಶೇಕಡಾ 90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.
ವಿದ್ಯಾರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ವೆಬ್‌ಸೈಟ್ cbse.gov.in, cbseresults.nic.in. ಗಳಿಗೆ ಭೇಟಿ ನೀಡಿ