ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಪ್ರಕಟ: ಬಾಲಕಿಯರೇ ಮೇಲುಗೈ

Posted By:

ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದ ಸಿಬಿಎಸ್ಇ 12ನೇ ತರಗತಿಯ ಪರೀಕ್ಷಾ ಫಲಿತಾಂಶವು ಮೇ.28 ರಂದು ಪ್ರಕಟಗೊಂಡಿದೆ. ಇಷ್ಟು ದಿನ ಕಾದಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರು ಈಗ ನಿರಾಳರಾಗಿದ್ದಾರೆ.

ಈ ವರ್ಷ ಸಿಬಿಎಸ್ಇ 12ನೇ ತರಗತಿಯ ತೇರ್ಗಡೆ ಪ್ರಮಾಣ ಸರಾಸರಿ ಶೇಕಡಾ 82ರಷ್ಟಿದೆ. ಸುಮಾರು 10 ಲಕ್ಷ ವಿದ್ಯಾರ್ಥಿಗಳು 12ನೇ ತರಗತಿ ಪರೀಕ್ಷೆಗೆ ಹಾಜರಾಗಿದ್ದಾರೆ. ಕಳೆದ ವರ್ಷ ಇದು ಶೇಕಡಾ 83.05ರಷ್ಟಾಗಿತ್ತು.

ಬಾಲಕಿಯರೇ ಮೇಲುಗೈ

ಈ ಬಾರಿಯು ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಬಾಲಕಿಯರು ಶೇ 87.50ರಷ್ಟು ಪ್ರಮಾಣದಲ್ಲಿ ಉತ್ತೀರ್ಣರಾಗಿದ್ದರೆ ಬಾಲಕರ ಪ್ರಮಾಣ ಶೇ 78 ಇದೆ. 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇ 95ಕ್ಕೂ ಅಧಿಕ ಅಂಕ ಪಡೆದಿದ್ದಾರೆ.

ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಪ್ರಕಟ

ಸಿಬಿಎಸ್ಇ 10 ವಲಯಗಳ ಪೈಕಿ ತಿರುವನಂತಪುರ ವಲಯ ಫಲಿತಾಂಶದಲ್ಲಿ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಚೆನ್ನೈ ಮತ್ತು ದೆಹಲಿ ಇವೆ.

ನೊಯ್ಡಾ ಮೂಲದ ಅಮಿತಿ ಇಂಟರ್ ನ್ಯಾಷನಲ್ ಶಾಲೆಯ ರಕ್ಷಾ ಗೋಪಾಲ್ ಶೇಕಡಾ 99.6 ಅಂಕ ಗಳಿಸುವ ಮೂಲಕ ದೇಶದಲ್ಲಿಯೇ ಉನ್ನತ ಸ್ಥಾನ ಗಳಿಸಿದ್ದಾಳೆ. ಚಂಡೀಗಢದ ಭೂಮಿ ಸಾವಂತ್ ದೆ ಎರಡನೇ ಸ್ಥಾನದಲ್ಲಿ ಶೇಕಡಾ 99.4 ಹಾಗೂ ಚಂಡೀಗಢದ ಭವನ್ ವಿದ್ಯಾಲಯದ ಆದಿತ್ಯ ಜೈನ್ ಶೇಕಡಾ 99.2 ಅಂಕ ಗಳಿಸಿದ್ದಾರೆ.

ವಿಜ್ಞಾನ, ಕಲೆ ಮತ್ತು ವಾಣಿಜ್ಯ ಮೂರೂ ವಿಭಾಗಗಳಲ್ಲಿ ಅತ್ಯುನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕರೆ ಮಾಡಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವದೇಕರ್ ಮಾತನಾಡಿದ್ದಾರೆ.

ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ವಿಷಯಕ್ಕೆ ಸಂಬಂಧಿಸಿದ ಪ್ರಕ್ರಿಯೆಯನ್ನು ಮುಂದುವರಿಸುವಂತೆ ದೆಹಲಿ ಹೈಕೋರ್ಟ್‌ ಕಳೆದ ವಾರ ಆದೇಶಿಸಿತ್ತು. ನಂತರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಮುಂದಾಗಿದ್ದ ಮಂಡಳಿ ಇದರಿಂದ ಫಲಿತಾಂಶ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಮನಗಂಡು ನಿರ್ಧಾರದಿಂದ ಹಿಂದೆ ಸರಿದಿತ್ತು.

ಸಿಬಿಎಸ್‌ಇ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ

ಫಲಿತಾಂಶ ಪ್ರಕಟವಾದ ನಂತರ ಮಂಡಳಿಯು ವಿದ್ಯಾರ್ಥಿಗಳಿಗೆ ಆಪ್ತ ಸಮಾಲೋಚನೆಗೆ ನೆರವು ನೀಡಲು ಸಹಾಯವಾಣಿ ಆರಂಭಿಸಿದೆ. ಬೆಳಿಗ್ಗೆ 8ರಿಂದ ರಾತ್ರಿ 10ರವರೆಗೆ 18000118004ಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದು.

English summary
After much anticipation by students, the board had announced that it would be declared on Sunday, May 28. The results can be checked on the official websites.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia