ನವೆಂಬರ್ ತಿಂಗಳಲ್ಲಿ ಸಿಬಿಎಸ್ಇ ನೆಟ್ ಪರೀಕ್ಷೆ

ಉಪನ್ಯಾಸಕರ ಅರ್ಹತಾ ಪರೀಕ್ಷೆ ಯುಜಿಸಿ ನೆಟ್-2017 ನೇ ಸಾಲಿನ ಪರೀಕ್ಷೆಯು 19-11-2017 ಭಾನುವಾರದಂದು ನಡೆಯಲಿದೆ. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್ಇ) ಪ್ರತಿವರ್ಷದಂತೆ ಈ ವರ್ಷವು ನಡೆಸುವ ಜವಾಬ್ದಾರಿ ಹೊತ್ತಿದೆ.

ಉಪನ್ಯಾಸಕರ ಅರ್ಹತಾ ಪರೀಕ್ಷೆ ಯುಜಿಸಿ ನೆಟ್-2017 ನೇ ಸಾಲಿನ ಪರೀಕ್ಷೆಯು 19-11-2017 ಭಾನುವಾರದಂದು ನಡೆಯಲಿದೆ. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್ಇ) ಪ್ರತಿವರ್ಷದಂತೆ ಈ ವರ್ಷವು ನಡೆಸುವ ಜವಾಬ್ದಾರಿ ಹೊತ್ತಿದೆ.

ಈ ವರ್ಷದ ನೆಟ್ ಪರೀಕ್ಷೆ ಬರೆಯಲಿಚ್ಚಿಸುವ ಅಭ್ಯರ್ಥಿಗಳು ಆಗಸ್ಟ್ 1 ರ ನಂತರ ಅನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಎನ್‌ಇಟಿ ಪರೀಕ್ಷೆ

ಸರ್ಕಾರಿ, ಅನುದಾನಿತ ಪದವಿ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗಲು ಅರ್ಹತಾ ಪರೀಕ್ಷೆ ಎನ್‌ಇಟಿ ಅಥವಾ ಎಸ್‌ಎಲ್‌ಇಟಿ ತೇರ್ಗಡೆಯಾಗಿರಬೇಕು.

ನವೆಂಬರ್ ನಲ್ಲಿ ಎನ್ಇಟಿ

ಕೇಂದ್ರ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮೂಲಕ ವರ್ಷಕ್ಕೆ ಎರಡು ಬಾರಿ ಎನ್‌ಇಟಿ ನಡೆಯುತ್ತದೆ. ಅಲ್ಲದೆ ಕೆಲ ರಾಜ್ಯಗಳು ವರ್ಷ, ಎರಡು ವರ್ಷಕ್ಕೊಮ್ಮೆ ಎಸ್‌ಎಲ್‌ಇಟಿ (ಸ್ಲೆಟ್‌) ನಡೆಸುತ್ತವೆ. ಆರು ತಿಂಗಳಿಗೊಮ್ಮೆ ನಡೆಯುವ ಎನ್‌ಇಟಿಯನ್ನು ದೇಶದಾದ್ಯಂತ ಸರಾಸರಿ 7 ಲಕ್ಷ ಅಭ್ಯರ್ಥಿಗಳು ಬರೆಯುತ್ತಿದ್ದಾರೆ. ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ಸ್ಲೆಟ್‌ ಪರೀಕ್ಷೆಗೂ ಲಕ್ಷಾಂತರ ಅಭ್ಯರ್ಥಿಗಳು ಹಾಜರಾಗುತ್ತಿದ್ದಾರೆ.

ಎನ್ಇಟಿ ಪರೀಕ್ಷಾ ವಿಧಾನ

  • ಎನ್ಇಟಿ ಪರೀಕ್ಷೆಯು ಒಟ್ಟು ಮೂರು ಪತ್ರಿಕೆಗಳನ್ನು ಒಳಗೊಂಡಿದ್ದು 350 ಅಂಕಗಳಿಗೆ ನಡೆಸಲಾಗುವುದು.
  • ಮೊದಲ ಪತ್ರಿಕೆ 60 ಪ್ರಶ್ನೆಗಳನ್ನೊಳಗೊಂಡಿದ್ದು 50 ಪ್ರಶ್ನೆಗಳಿಗೆ ಅಭ್ಯರ್ಥಿಯು ಉತ್ತರಿಸಬೇಕಾಗುತ್ತದೆ. ಪ್ರತಿ ಪ್ರಶ್ನೆಗೆ ಎರಡು ಅಂಕಗಳನ್ನು ನಿಗದಿಪಡಿಸಲಾಗುತ್ತದೆ. ಈ ಪತ್ರಿಕೆಯು ಸಾಮಾನ್ಯ ಪತ್ರಿಕೆಯಾಗಿದ್ದು ಲಾಜಿಕ್, ರೀಸನಿಂಗ್, ಮೆಂಟಲ್ ಎಬಿಲಿಟಿ ಸೇರಿದಂತೆ ಹತ್ತು ವಿವಿಧ ವಿಷಯಗಳ ಬಗ್ಗೆ ಕೇಳಲಾಗುವುದು.
  • ಎರಡನೇ ಪತ್ರಿಕೆಯು 50 ಪ್ರಶ್ನೆಗಳನ್ನು ಒಳಗೊಂಡಿದ್ದು ಇದು ವಿಷಯಾಧರಿತ ಪತ್ರಿಕೆಯಾಗಿರುತ್ತದೆ.ಪ್ರತಿ ಪ್ರಶ್ನೆಗೆ ಎರಡು ಅಂಕಗಳನ್ನು ನಿಗದಿಪಡಿಸಲಾಗುತ್ತದೆ.
  • ಮೂರನೇ ಪತ್ರಿಕೆಯು 75 ಪ್ರಶ್ನೆಗಳನ್ನು ಒಳಗೊಂಡಿದ್ದು ಇದು ವಿಷಯಾಧರಿತ ಪತ್ರಿಕೆಯಾಗಿರುತ್ತದೆ.ಪ್ರತಿ ಪ್ರಶ್ನೆಗೆ ಎರಡು ಅಂಕಗಳನ್ನು ನಿಗದಿಪಡಿಸಲಾಗುತ್ತದೆ.
  • ತೇರ್ಗಡೆ ವಿಧಾನ ಯುಜಿಸಿ ನಿಯಮಾವಳಿಯಂತೆ ಶೇಕಡವಾರಿನ (ಕಟ್ ಆಫ್ ಪರ್ಸೆಂಟೇಜ್) ಮೂಲಕ ಅಭ್ಯರ್ಥಿಗಳ ಫಲಿತಾಂಶ ಘೋಷಿಸಲಾಗುತ್ತದೆ. ಹೆಚ್ಚಿನ ವಿವರಗಳಿಗಾಗಿ cbsenet.nic.in ಗಮನಿಸಿ

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-08-2017
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಖ: 30-08-2017
  • ಪರೀಕ್ಷೆ ನಡೆಯುವ ದಿನಾಂಕ: 19-11-2017
    For Quick Alerts
    ALLOW NOTIFICATIONS  
    For Daily Alerts

    English summary
    It is notified that CBSE will conduct the next UGC-NET for Junior Research Fellowship & Eligibility for Assistant Professor on 19th November, 2017 (Sunday). The candidates who desire to appear in the test may see the detailed notification available on the website http://cbsenet.nic.in from 24th July, 2017.
    --Or--
    Select a Field of Study
    Select a Course
    Select UPSC Exam
    Select IBPS Exam
    Select Entrance Exam
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X