ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಬೋರ್ಡ್ ಸಿಟಿಇಟಿ ಜುಲೈ 2020ರ ಪರೀಕ್ಷೆಯನ್ನು ಮುಂದೂಡಿದೆ. ಸಿಟಿಇಟಿ ಪರೀಕ್ಷೆಯನ್ನು ವರ್ಷಕ್ಕೆ ಎರಡು ಬಾರಿ ಡಿಸೆಂಬರ್ ಮತ್ತು ಜುಲೈ ತಿಂಗಳಿನಲ್ಲಿ ನಡೆಸಲಾಗುವುದು. ಆದರೆ ಈ ವರ್ಷ ಕೊರೋನಾ ವೈರಸ್ ಸಮಸ್ಯೆಯಿಂದಾಗಿ ಜುಲೈ 5ರಂದು ನಡೆಯಬೇಕಿದ್ದ ಸಿಟಿಇಟಿ ಪರೀಕ್ಷೆಯನ್ನು ಮುಂದೂಡಲಾಗುತ್ತಿದೆ.

ಜುಲೈ 5ರಂದು ನಡೆಯಬೇಕಿದ್ದ ಸಿಬಿಎಸ್ಇ ಸಿಟಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಪರಿಸ್ಥಿತಿಯನ್ನು ಗಮನಿಸಿಕೊಂಡು ಮುಂದಿನ ಪರೀಕ್ಷಾ ದಿನಾಂಕವನ್ನು ಘೋಷಿಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಡಾ. ರಮೇಶ್ ಪೋಖ್ರಿಯಾಲ್ ನಿಶಾಂಕ್ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಆಡಳಿತಕ್ಕೆ ಒಳಪಟ್ಟ (ಕೆ.ವಿ.ಎಸ್, ಎನ್.ವಿ.ಎಸ್ ಇತ್ಯಾದಿ) ಹಾಗೂ ಕೇಂದ್ರಾಡಳಿತ ಪ್ರದೇಶದ ಶಾಲೆಗಳ ಹಾಗೂ ಅನುದಾನ ರಹಿತ ಶಾಲೆಗಳ ಶಿಕ್ಷಕರ ನೇಮಕಕ್ಕೆ ಅರ್ಹತಾ ಪರೀಕ್ಷೆ ಇದಾಗಿದೆ. ಈ ಪರೀಕ್ಷೆಯನ್ನು ವರ್ಷಕ್ಕೆ ಎರಡು ಬಾರಿ ನಡೆಸಲಾಗುವುದು. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮುಂದಿನ ಪರೀಕ್ಷಾ ದಿನಾಂಕವನ್ನು ತಿಳಿಯಲು ಆಗಾಗ್ಗೆ ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸುತ್ತಿರತಕ್ಕದ್ದು.


Click it and Unblock the Notifications











