CBSE CTET Result 2021 : ಫಲಿತಾಂಶ ವೀಕ್ಷಿಸುವುದು ಹೇಗೆ ?

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ ಅಥವಾ CTET ಪರೀಕ್ಷೆಯ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ವೀಕ್ಷಿಸಬಹುದು.

ಸಿಬಿಎಸ್ಇ ಸಿಟಿಇಟಿ ಫಲಿತಾಂಶ ಪ್ರಕಟ

ಸಿಬಿಎಸ್ಇ ಸಿಟಿಇಟಿ 15ನೇ ಆವೃತ್ತಿಯ ಪರೀಕ್ಷೆಯನ್ನು ಡಿಸೆಂಬರ್ 16, 2021 ರಿಂದ ಜನವರಿ 21,2022ರ ವರೆಗೆ ಕಂಪ್ಯೂಟರ್ ಆಧಾರಿತ ಆನ್‌ಲೈನ್ ಮೋಡ್‌ನಲ್ಲಿ ಎರಡು ಪಾಳಿಗಳಲ್ಲಿ ನಡೆಸಲಾಯಿತು. ಪರೀಕ್ಷೆ ಬರೆದ ಅಭ್ಯರ್ಥಿಗಳು ವೆಬ್‌ಸೈಟ್ ctet.nic.in ನಲ್ಲಿ ಮತ್ತು ವೆಬ್‌ಸೈಟ್ cbse.nic.in ನಲ್ಲಿ ಫಲಿತಾಂಶಗಳನ್ನು ವೀಕ್ಷಿಸಬಹುದು.

"ಅಭ್ಯರ್ಥಿಗಳ ಅಂಕಪಟ್ಟಿಗಳು ಮತ್ತು ಅರ್ಹತಾ ಪ್ರಮಾಣಪತ್ರಗಳನ್ನು ಶೀಘ್ರದಲ್ಲೇ ಡಿಜಿಲಾಕರ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿ ನಮೂನೆಯ CTET ಡಿಸೆಂಬರ್ - 2021 ರಲ್ಲಿ ಅವರು ಒದಗಿಸಿದ ತಮ್ಮ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ಅದನ್ನು ಡೌನ್‌ಲೋಡ್ ಮಾಡಬಹುದು" ಎಂದು ಸಿಬಿಎಸ್ಇ ಹೇಳಿಕೆಯಲ್ಲಿ ತಿಳಿಸಿದೆ.

ಸಿಬಿಎಸ್ಇ ಸಿಟಿಇಟಿ ಪರೀಕ್ಷೆಯ ಪತ್ರಿಕೆ 1 ಕ್ಕೆ 18,92,276 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು ಮತ್ತು 14,95,511 ಅಭ್ಯರ್ಥಿಗಳು ಹಾಜರಾಗಿದ್ದರು. ಈ ಪೈಕಿ 4,45,467 ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಪತ್ರಿಕೆ 2ಕ್ಕೆ 16,62,886 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, 12,78,165 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 2,20,069 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ.

ಸಿಬಿಎಸ್ಇ ಸಿಟಿಇಟಿ ಡಿಸೆಂಬರ್ 2021 ಫಲಿತಾಂಶ ವೀಕ್ಷಿಸುವುದು ಹೇಗೆ ? :

ಹಂತ 1: ಅಧಿಕೃತ ವೆಬ್‌ಸೈಟ್‌ ctet.nic.in ಗೆ ಭೇಟಿ ನೀಡಿ.

ಹಂತ 2: ಸಿಬಿಎಸ್ಇ ಸಿಟಿಇಟಿ ಡಿಸೆಂಬರ್ 2021 ಪರೀಕ್ಷೆಯ ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ

ಹಂತ 3: ಅಭ್ಯರ್ಥಿಗಳು ನಿಮ್ಮ ರೋಲ್ ನಂಬರ್ ಅನ್ನು ನಮೂದಿಸಿ ಮತ್ತು ಸಲ್ಲಿಸಿ

ಹಂತ 4: ಫಲಿತಾಂಶವು ಪರದೆಯ ಮೇಲೆ ಮೂಡುತ್ತದೆ
ಹಂತ 5 : ಅಭ್ಯರ್ಥಿಗಳು ಫಲಿತಾಂಶ ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಸಿಟಿಇಟಿ ಪರೀಕ್ಷೆ 2022 ರ ನಂತರ ಮುಂದೇನು ? :

ನೀವು ಸಿಟಿಇಟಿ ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದರೆ ಕೆವಿ, ಎನ್‌ವಿಎಸ್, ಡಿಎಸ್‌ಎಸ್‌ಎಸ್‌ಬಿ ಸೇರಿದಂತೆ ಸರ್ಕಾರಿ ಶಾಲೆಗಳಲ್ಲಿ ಮತ್ತು ಖಾಸಗಿ ಶಾಲೆಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತೀರಿ. ಭಾರತದ ಪ್ರತಿಯೊಂದು ಶಾಲೆಯು ಸಿಟಿಇಟಿ ಅರ್ಹತೆಯನ್ನು ಪರಿಗಣಿಸುತ್ತದೆ.

ಈ ಪರೀಕ್ಷೆಯಲ್ಲಿ ನೀವು ಉತ್ತೀರ್ಣರಾಗಿರದಿದಲ್ಲಿ ಮತ್ತೊಮ್ಮೆ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು. ಪರೀಕ್ಷೆಯನ್ನು ತೆಗೆದುಕೊಳ್ಳಲು ಇಂತಿಷ್ಟೇ ಭಾರಿ ಎಂಬ ನಿಯಮಗಳಿರುವುದಿಲ್ಲ ಹಾಗಾಗಿ ಮುಂದಿನ ಪರೀಕ್ಷೆಗೆ ಉತ್ತಮ ರೀತಿಯಲ್ಲಿ ಸಿದ್ಧತೆ ನಡೆಸಿ ಪರೀಕ್ಷೆಗೆ ಹಾಜರಾಗಬಹುದು.

ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
CBSE released CTET december 2021 results. Here is how to check results.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X