CBSE New Rules For Year 2021-22: ಸಿಬಿಎಸ್ಇ 10 ಮತ್ತು 12ನೇ ತರಗತಿ ಪಠ್ಯಕ್ರಮ ಎರಡು ಅವಧಿಗೆ ವಿಂಗಡನೆ

ಸಿಬಿಎಸ್ಇ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ಪರೀಕ್ಷಾ ಯೋಜನೆ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳ ಪಠ್ಯಕ್ರಮವನ್ನು ಬದಲಾಯಿಸಿ ಎರಡು ಅವಧಿಗಳಿಗೆ ವಿಂಗಡಿಸಲಾಗಿದೆ. ಪ್ರತಿ ಟರ್ಮ್ ನ ಕೊನೆಯಲ್ಲಿ ಪರೀಕ್ಷೆಗಳನ್ನು ನಡೆಸಲು ಕೇಂದ್ರೀಯ ಪೌಢ ಶಿಕ್ಷ ಮಂಡಳಿ(ಸಿಬಿಎಸ್‍ಇ) ನಿರ್ಧಾರ ಕೈಗೊಂಡಿದೆ.

ಕೊರೋನಾ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಶೇ. 50- ಶೇ. 50 ಪಠ್ಯಕ್ರಮಕ್ಕೆ ಅನುಗುಣವಾಗಿ ಹಂಚಿಕೆ ಮಾಡಲಾಗಿದೆ. ಮೊದಲ ಪರೀಕ್ಷೆ ನವೆಂಬರ್-ಡಿಸೆಂಬರ್ ನಲ್ಲಿ ನಡೆದರೆ ಎರಡನೇ ಸೆಶನ್ ಮಾರ್ಚ್ ಹಾಗೂ ಎಪ್ರಿಲ್ ನಲ್ಲಿ ನಡೆಯಲಿದೆ. ಪ್ರತಿ ಟರ್ಮ್ ನ ಅಂತ್ಯದಲ್ಲಿ ನಡೆಯುವ ಪರೀಕ್ಷೆಯು 90 ನಿಮಿಷಗಳ ಅವಧಿಯಾಗಿರುತ್ತದೆ. ಟರ್ಮ್ 1 ಪರೀಕ್ಷೆ ಬಹು ಆಯ್ಕೆಗಳ ಪ್ರಶ್ನೆಗಳನ್ನು ಮತ್ತು ಟರ್ಮ್ 2 ಪರೀಕ್ಷೆ ವಿವಿಧ ರೂಪಗಳ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ವಿದ್ಯಾರ್ಥಿಯ ಅಂತಿಮ ಫಲಿತಾಂಶ ಪ್ರಕಟಣೆಗೆ ಎರಡೂ ಪರೀಕ್ಷೆಗಳಲ್ಲಿನ ಅಂಕಗಳನ್ನು ಪರಿಗಣಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

ಶೈಕ್ಷಣಿಕ ವರ್ಷದ ಕೊನೆಯಲ್ಲಿ ಮಂಡಳಿ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಸಂಭವನೀಯತೆ ಹೆಚ್ಚಿಸುವ ಉದ್ದೇಶದಿಂದ ಈ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಹಿಂದಿನ ಶೈಕ್ಷಣಿಕ ವರ್ಷದಂತೆ ಪಠ್ಯಕ್ರಮದಲ್ಲಿ ಮಾರ್ಪಾಡು ಮಾಡಲಾಗಿದ್ದು, ಈ ತಿಂಗಳ ಅಂತ್ಯದ ವೇಳೆಗೆ ಹೊಸ ಪಠ್ಯಕ್ರಮದ ಬಗ್ಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಮಂಡಳಿ ಹೇಳಿದೆ.

For Quick Alerts
ALLOW NOTIFICATIONS  
For Daily Alerts

English summary
CBSE splits the syllabus in 50 50 for class 10 and 12 board exams for 2021-22 academic year.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X