ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ವಿಶೇಷ ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಸಂದರ್ಶನ ಸುತ್ತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 274 ವಿಶೇಷ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ದರಿರುವ ಅಭ್ಯರ್ಥಿಗಳಿಂದ ನವೆಂಬರ್ 23,2021 ರಿಂದ ಡಿಸೆಂಬರ್ 30,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.
ವಿಶೇಷ ಅಧಿಕಾರಿ ಹುದ್ದೆಗಳಿಗೆ ಪದವಿ, ಪಿಹೆಚ್.ಡಿ, ಸಿಎ/ಐಸಿಡಬ್ಲ್ಯೂಎ/ಎಂಬಿಎ, ಬಿ.ಇ/ಬಿ.ಟೆಕ್/ಎಂ.ಇ/ಎಂ.ಟೆಕ್/ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಮತ್ತು ಕನಿಷ್ಟ 20 ರಿಂದ ಗರಿಷ್ಟ 45 ವರ್ಷ ವಯಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ವಿಶೇಷ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 1,00,350/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ಲೈನ್ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ ಮತ್ತು ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ. ಅದರನ್ವಯ ಆನ್ಲೈನ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಸಂದರ್ಶನ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ನೋಡಿ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ವಿಶೇಷ ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ? :
ಸ್ಟೆಪ್ 1: ಅಭ್ಯರ್ಥಿಗಳು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ವೆಬ್ಸೈಟ್ https://www.centralbank.net.in/ ಗೆ ಭೇಟಿ ನೀಡಿ
ಸ್ಟೆಪ್ 2: ನಂತರ ಹೋಂ ಪೇಜ್ನಲ್ಲಿ ಲಭ್ಯವಿರುವ "Download Interview Call Letter For Specialist Officer Posts" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಸಂದರ್ಶನ ಸುತ್ತಿಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗತಕ್ಕದ್ದು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಅನ್ನು ಚೆಕ್ ಮಾಡಿಕೊಳ್ಳಬಹುದು.
ಅಭ್ಯರ್ಥಿಗಳು ನೇರವಾಗಿ ಸಂದರ್ಶನ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.