ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಇದೀಗ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 74 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನವೆಂಬರ್ 21,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿರುತ್ತದೆ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಎಸ್ಓ ಹುದ್ದೆಗಳ ನೇಮಕಾತಿಗಾಗಿ ಡಿಸೆಂಬರ್ 22,2019ರಂದು ಆನ್‌ಲೈನ್ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಅಭ್ಯರ್ಥಿಗಳಿಗೆ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಡಿಸೆಂಬರ್ 21,2019ರ ವರೆಗೆ ಕಾಲಾವಕಾಶವಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಎಸ್ಓ ಹುದ್ದೆಗಳ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಅನುಸರಿಸಿ:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್ ಸೈಟ್ https://www.centralbankofindia.co.in/english/home.aspx ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಲಭ್ಯವಿರುವ Career with us ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ new recruitment ಮೇಲೆ ಕ್ಲಿಕ್ ಮಾಡಿ ನಂತರ recruitment of specialist officersನ ಕೆಳಗಿರುವ call letter-click here to download ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಮತ್ತೊಂದು ಪುಟ ತೆರೆಯುತ್ತದೆ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ ರೋಲ್ ನಂಬರ್ ಮತ್ತು ನಿಮ್ಮ ಜನ್ಮ ದಿನಾಂಕ / ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 5: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿಕೊಂಡು ಡೌನ್‌ಲೋಡ್ ಮಾಡಿಕೊಳ್ಳಿ
ಸ್ಟೆಪ್ 6: ಅಭ್ಯರ್ಥಿಗಳು ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications