Central Government Recruit 10 Lakh People : 10 ಲಕ್ಷ ಹುದ್ದೆಗಳ ಭರ್ತಿಗೆ ಕೇಂದ್ರ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಯನ್ನು ಪರಿಶೀಲಿಸಿ ಮುಂದಿನ ಒಂದೂವರೆ ವರ್ಷಗಳಲ್ಲಿ 10 ಲಕ್ಷ ಜನರನ್ನು ನೇಮಕ ಮಾಡುವುದಾಗಿ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

ಮುಂದಿನ 1.5 ವರ್ಷದಲ್ಲಿ 10 ಲಕ್ಷ ಹುದ್ದೆ ಭರ್ತಿಗೆ ಕೇಂದ್ರ ಸೂಚನೆ

ಎಲ್ಲಾ ಇಲಾಖೆ ಮತ್ತು ಸಚಿವಾಲಯಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಜನರನ್ನು "ಮಿಷನ್ ಮೋಡ್" ಮೂಲಕ ನೇಮಕ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ (PMO) ತಿಳಿಸಿದೆ.

ಇದರೊಂದಿಗೆ ಡಿಸೆಂಬರ್ 2023 ರೊಳಗೆ 10 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರವು ಗಡುವನ್ನು ನಿಗದಿಪಡಿಸಿದೆ, ಇದಕ್ಕಾಗಿ ಎಲ್ಲಾ ನೇಮಕಾತಿಗಳು 18 ತಿಂಗಳೊಳಗೆ ನಡೆಯುತ್ತವೆ.

ಮುಂದಿನ 1.5 ವರ್ಷದಲ್ಲಿ 10 ಲಕ್ಷ ಹುದ್ದೆ ಭರ್ತಿಗೆ ಕೇಂದ್ರ ಸೂಚನೆ

ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಪದೇ ಪದೇ ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಈ ನಿರ್ಧಾರ ಬಂದಿದೆ. ವಿವಿಧ ಸರ್ಕಾರಿ ವಲಯಗಳಲ್ಲಿ ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳನ್ನು ಆಗಾಗ್ಗೆ ಫ್ಲ್ಯಾಗ್ ಮಾಡಲಾಗಿದೆ.

18 ತಿಂಗಳಲ್ಲಿ 10 ಲಕ್ಷ ಯುವಕರನ್ನು ನೇಮಿಸಿಕೊಳ್ಳಲು ಎಲ್ಲಾ ಇಲಾಖೆಗಳಿಗೆ ನಿರ್ದೇಶನ ನೀಡಿದ ಪ್ರಧಾನಿ ನರೇಂದ್ರ ಮೋದಿಯವರ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ಲಾಘಿಸಿದ್ದಾರೆ.

ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಜನರ ನೇಮಕಾತಿಯನ್ನು ಸರ್ಕಾರವು ಮಿಷನ್ ಮೋಡ್‌ನಲ್ಲಿ ಮಾಡಲಿದೆ ಎಂದು ಪ್ರಧಾನಿ ಕಾರ್ಯಾಲಯ ಮಂಗಳವಾರ ತಿಳಿಸಿದ ನಂತರ, ಹಲವಾರು ಕ್ಯಾಬಿನೆಟ್ ಸಚಿವರು ಈ ನಿರ್ಧಾರವನ್ನು ಶ್ಲಾಘಿಸಿದರು.

For Quick Alerts
ALLOW NOTIFICATIONS  
For Daily Alerts

English summary
PM narendra modi instructed to recruitment of 10 lakh people through mission mode in next 1.5 years.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X