ಸ್ಮಾರ್ಟ್ ಕ್ಲಾಸ್ ಮೂಲಕ ಶಾಲಾ ಮಕ್ಕಳ ಹೊರೆ ಇಳಿಸಲು ಕೇಂದ್ರ ಸರ್ಕಾರದ ಚಿಂತನೆ

Posted By:

ಶಾಲೆಗಳ ಡಿಜಿಟಲೀಕರಣ ಮತ್ತು ಶಾಲಾ ಮಕ್ಕಳ ಚೀಲದ ಭಾರ ಕಡಿಮೆ ಮಾಡುವ ಉದ್ದೇಶದಿಂದ ಶಾಲೆಗಳಲ್ಲಿ ಡಿಜಿಟಲ್ ಪರದೆ ಮತ್ತು ಪ್ರೊಜೆಕ್ಟರ್‌ಗಳನ್ನು ಅಳವಡಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ.

ಜಾವದ್ ತಾಲ್ಲೂಕಿನಲ್ಲಿ ಉನ್ನತ ತಂತ್ರಜ್ಞಾನದ 20 ಶಾಲೆಗಳನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಈ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಸ್ಮಾರ್ಟ್ ಕ್ಲಾಸ್ ಚಿಂತನೆ

ಡಿಜಿಟಲ್ ಪರದೆಗಳು ಮತ್ತು ಪ್ರೊಜೆಕ್ಟರ್ ಅಳವಡಿಸಿಕೊಳ್ಳುವ ಶಾಲೆಗಳಿಗೆ ಅಗತ್ಯವಾದ ಸಾಫ್ಟ್‌ವೇರ್‌ಗಳನ್ನು ಕೇಂದ್ರ ಸರ್ಕಾರ ಒದಗಿಸಲಿದೆ ಎಂದು ಹೇಳಿದ್ದಾರೆ. ಅಲ್ಲದೆ ಉನ್ನತ ತಂತ್ರಜ್ಞಾನ ಅಳವಡಿಸಲಾಗಿರುವ 20 ಶಾಲೆಗಳ ಶಿಕ್ಷಕರಿಗೆ ಹೊಸ ತಂತ್ರಜ್ಞಾನದ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.

ಪ್ರಸ್ತುತ ದೇಶದಲ್ಲಿ 1ರಿಂದ 10ನೇ ತರಗತಿವರೆಗೆ 26 ಕೋಟಿ ವಿದ್ಯಾರ್ಥಿಗಳು ಇದ್ದು, 15 ಲಕ್ಷ ಶಾಲೆಗಳಲ್ಲಿ ಒಟ್ಟು ಎಪತ್ತು ಲಕ್ಷ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. 10 ಕೋಟಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟ ನೀಡಲಾಗುತ್ತಿದೆ ಎಂಬ ಮಾಹಿತಿ ನೀಡಿದ್ದಾರೆ.

ಸ್ಮಾರ್ಟ್ ಕ್ಲಾಸ್ ಪ್ರಯೋಜನಗಳು
ಸ್ಮಾರ್ಟ್ ಕ್ಲಾಸ್ ರೂಮುಗಳು ಶಿಕ್ಷಕರು ಮತ್ತು ಮಕ್ಕಳ ಮೇಲಿನ ಹೊರೆಯನ್ನು ಕಡಿಮೆ ಮಾಡುವುದಲ್ಲದೇ ಮಕ್ಕಳ ಇಲ್ಲಿ ವಿಷಯಗಳನ್ನು ಬಹುಬೇಗ ಗ್ರಹಿಸುತ್ತಾರೆ. ತರಗತಿಯ ಡಿಜಿಟಲ್ ಪರದೆಯತ್ತ ತಮ್ಮ ಮನಸ್ಸನ್ನು ಕೇಂದ್ರಿಕರಿಸುವುದರಿಂದ ಪಠ್ಯದ ವಿಷಯಗಳು ದೀರ್ಘವಾಗಿ ಮಕ್ಕಳ ಮನಸ್ಸಿನಲ್ಲಿ ಉಳಿಯುತ್ತವೆ. ಶಿಕ್ಷಕರು ಪಠ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಉದಾಹರಣೆಗಳ ಮೂಲಕ ಪರದೆಯ ಮೇಲೆ ತೋರಿಸುವುದರಿಂದ ವಿದ್ಯಾರ್ಥಿಗಳಲ್ಲಿ ಯಾವುದೇ ಗೊಂದಲಗಳಿರುವುದಿಲ್ಲ. ಎಲ್ಲಕ್ಕಿಂತ ಹೆಚ್ಚಿನದಾಗಿ ವಿದ್ಯಾರ್ಥಿಗಳು ತಮ್ಮ ಗಮನವನ್ನು ಆಚೀಚೆ ಹರಿಸುವುದಿಲ್ಲ.

English summary
Union Human Resources Development Minister Prakash Javadekar today said digitisation of schools will help lessen the weight of school bags.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia