Surya Namaskara at PU Colleges : ಪಿಯು ಕಾಲೇಜುಗಳಲ್ಲಿ 'ಸೂರ್ಯ ನಮಸ್ಕಾರ' ಕಾರ್ಯಕ್ರಮ ಹಮ್ಮಿಕೊಳ್ಳಲು ಕೇಂದ್ರ ಸೂಚನೆ

ರಾಜ್ಯದ ಎಲ್ಲಾ ಪದವಿಪೂರ್ವ ಕಾಲೇಜುಗಳಲ್ಲಿ ಜನವರಿ 1 ರಿಂದ ಫೆಬ್ರವರಿ 7,2022ರ ವರೆಗೆ ಸೂರ್ಯ ನಮಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಅದಾಗ್ಯೂ ಜನವರಿ 26,2022ರಂದು 'ಸಂಗೀತದೊಂದಿಗೆ ಸೂರ್ಯ ನಮಸ್ಕಾರ ಆಯೋಜಿಸಬೇಕು' ಎಂದೂ ಕೂಡ ತಿಳಿಸಿದೆ.

 
ರಾಜ್ಯದ ಎಲ್ಲಾ ಪಿಯು ಕಾಲೇಜುಗಳಲ್ಲಿ 'ಸೂರ್ಯ ನಮಸ್ಕಾರ' ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಕೇಂದ್ರ ಸೂಚನೆ

75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ 'ಸೂರ್ಯ ನಮಸ್ಕಾರ' ಕಾರ್ಯಕ್ರಮ ಅಯೋಜಿಸುವಂತೆ ಕೇಂದ್ರ ಶಿಕ್ಷಣ ಸಚಿವಾಲಯ ಎಲ್ಲಾ ರಾಜ್ಯಗಳ ಶಿಕ್ಷಣ ಇಲಾಖೆಯ ಮುಖ್ಯಸ್ಥರಿಗೆ ಡಿ.16ರಂದು ಪತ್ರ ಬರೆದು ಸೂಚಿಸಿತ್ತು. ಅದರನ್ವಯ ಜಿಲ್ಲಾ ವ್ಯಾಪ್ತಿಗಳಲ್ಲಿ ಬರುವ ಎಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾರಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ನಂತರ ಕಾರ್ಯಕ್ರಮದ ಸಂಪೂರ್ಣ ಮಾಹಿತಿಯನ್ನು ಇಲಾಖೆಯ ಶೈಕ್ಷಣಿಕ ಶಾಖೆಗೆ ಸಲ್ಲಿಸಬೇಕು ಎಂದು ಎಲ್ಲಾ ಜಿಲ್ಲಾ ಉಪನಿರ್ದೇಶಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಸೂರ್ಯ ನಮಸ್ಕಾರವು ಯೋಗಾಸನದ 10 ಭಂಗಿಗಳನ್ನು ಒಳಗೊಂಡಿದ್ದು, ವಿದ್ಯಾರ್ಥಿಗಳ ಆರೋಗ್ಯ ಕಾಪಾಡಿಕೊಳ್ಳಲು ಮತ್ತು ಮನೋಬಲ ಅಭಿವೃದ್ಧಿಗೆ ಸಹಾಯವಾಗಲಿದೆ. ಕೆಂದ್ರದ ಸೂಚನೆಯಂತೆ ಜನವರಿ 1,2022 ರಿಂದ ಫೆಬ್ರವರಿ 7,2022ರ ವರೆಗೆ ಅಂದರೆ ಒಟ್ಟು 38 ದಿನಗಳ ಪೈಕಿ, 21 ದಿನ ಬೆಳಗ್ಗಿನ ಅಸೆಂಬ್ಲಿ ಅವಧಿಯಲ್ಲಿ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರಗಳನ್ನು ಮಾಡಬೇಕು. ಪ್ರತಿ ದಿನ 13 ಸೂರ್ಯ ನಮಸ್ಕಾರಗಳಂತೆ ಒಟ್ಟು 273 ಸೂರ್ಯ ನಮಸ್ಕಾರಗಳನ್ನು ಮಾಡಿದವರಿಗೆ ಇ-ಪ್ರಮಾಣಪತ್ರ ನೀಡುವುದಾಗಿ ರಾಷ್ಟ್ರೀಯ ಯೋಗಾಸನ ಸ್ಪೋರ್ಟ್ಸ ಫೆಡರೇಷನ್ ತಿಳಿಸಿದೆ.

ಪದವಿ ಪೂರ್ವ ಕಾಲೇಜುಗಳಲ್ಲಿ 'ಸೂರ್ಯ ನಮಸ್ಕಾರ' ಕಾರ್ಯಕ್ರಮ ಆಯೋಜನೆ ಕುರಿತು ಉಪನ್ಯಾಸಕರ ವಲಯದಿಂದ ವಿರೋಧ ವ್ಯಕ್ತವಾಗಿದೆ.

ರಾಜ್ಯದ ಎಲ್ಲಾ ಪಿಯು ಕಾಲೇಜುಗಳಲ್ಲಿ 'ಸೂರ್ಯ ನಮಸ್ಕಾರ' ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಕೇಂದ್ರ ಸೂಚನೆ

ಸೂರ್ಯ ನಮಸ್ಕಾರದ ಪ್ರಯೋಜನಗಳು:

* ದೇಹ ಸದೃಢವಾಗುವುದು:

ಈ ವ್ಯಾಯಾಮ ಅಷ್ಟೇನು ಶ್ರಮದಾಯಕವಲ್ಲ ಆದ್ದರಿಂದ ಇದನ್ನು ಪ್ರತಿಯೊಬ್ಬರು ಮಾಡಬಹುದಾಗಿದೆ. ವಿದ್ಯಾರ್ಥಿಗಳು ಈ ಆಸನವನ್ನು ಮಾಡಿದರೆ ಉತ್ತಮ ದೇಹದ ಬೆಳವಣಿಗೆಯಾಗಲಿದೆ.

 

* ರಕ್ತ ಸಂಚಲನ:

ಸೂರ್ಯ ನಮಸ್ಕಾರ ಮಾಡಿದರೆ ರಕ್ತ ಸಂಚಾರ ಸರಾಗವಾಗಿ ನಡೆಯಲು ಸಹಕಾರಿಯಾಗುವುದು. ರಕ್ತಸಂಚಾರ ಸರಾಗವಾಗಿ ನಡೆದರೆ ಕೀಲು ನೋವು ಮುಂತಾದ ಕಾಯಿಲೆಗಳನ್ನು ತಡೆಗಟ್ಟಬಹುದು.

* ಜೀರ್ಣಕ್ರಿಯೆ:

ಸೂರ್ಯನಮಸ್ಕಾರ ಮಾಡಿದರೆ ಮಕ್ಕಳಲ್ಲಿ ಅಜೀರ್ಣದಂತಹ ಸಮಸ್ಯೆ ಕಂಡು ಬರುವುದಿಲ್ಲ.

* ಶ್ವಾಸಕೋಶದ ಆರೋಗ್ಯ:

ಇದು ಥೈರಾಯ್ಡ್, ಪ್ಯಾರಾಥೈರಾಯ್ಡ್ ಮತ್ತು ಪಿಟ್ಯುಟರಿ ಗ್ರಂಥಿ ಮತ್ತು ಎಂಡೋಕ್ರಿನಲ್ ಗ್ರಂಥಿಗಳು ಸಾಮಾನ್ಯವಾಗಿ ಕೆಲಸ ಮಾಡುವಂತೆ ಮಾಡುತ್ತದೆ.

* ನರವ್ಯೂಹ ಮತ್ತು ಮೆದುಳು ಚುರುಕಾಗುವುದು:

ವಿದ್ಯಾರ್ಥಿಗಳ ಜ್ಞಾಪಕ ಶಕ್ತಿ ಮತ್ತು ಏಕಾಗ್ರತೆ ಹೆಚ್ಚುವುದು. ಆದ್ದರಿಂದ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ ಅಭ್ಯಾಸ ಮಾಡುವುದು ಒಳ್ಳೆಯದು.

* ಖಿನ್ನತೆ ಇರುವುದಿಲ್ಲ:

ಸೂರ್ಯ ನಮಸ್ಕಾರ ಅಭ್ಯಾಸ ಇರುವವರೆಗೆ ಖಿನ್ನತೆ ಕಾಡುವುದಿಲ್ಲ.

* ನಿದ್ರಾಹೀನತೆ ಸಮಸ್ಯೆ ದೂರವಾಗುವುದು:

ಒತ್ತಡ ಮತ್ತು ಜೀವನ ಶೈಲಿಯಿಂದಾಗಿ ನಿದ್ರಾಹೀನತೆ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಇದನ್ನು ಹೋಗಲಾಡಿಸಲು ಸೂರ್ಯ ನಮಸ್ಕಾರ ಅಭ್ಯಾಸ ಮಾಡುವುದು ಒಳ್ಳೆಯದು.

For Quick Alerts
ALLOW NOTIFICATIONS  
For Daily Alerts

English summary
Central government gave instruction to do surya namaskara program at all pu colleges in karnataka from january 1 to February 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X