20ಲಕ್ಷ ಉದ್ಯೋಗ ಸೃಷ್ಟಿ: ನಿರುದ್ಯೋಗ ನಿವಾರಣೆಗೆ ಮುಂದಾದ ಕೇಂದ್ರ ಸರ್ಕಾರ

Posted By:

ಅಧಿಕಾರಕ್ಕೆ ಬಂದರೆ ಲಕ್ಷಾಂತರ ಮಂದಿಗೆ ಉದ್ಯೋಗ ಕಲ್ಪಿಸುವುದಾಗಿ ಘೋಷಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನ ಮಾತನ್ನು ಕಾರ್ಯರೂಪಕ್ಕೆ ತರಲು ಸಿದ್ಧತೆ ನಡೆಸಿದೆ.

ಬಿಇಎಲ್: ಸೀನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಎಂಬ ಕುರಿತು ಟೀಕೆಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

20ಲಕ್ಷ ಉದ್ಯೋಗ ಸೃಷ್ಟಿ

ಕೇಂದ್ರ ಮತ್ತು ರಾಜ್ಯ ಸರಕಾರಗಳ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡುವ ಮೂಲಕ ದೇಶದಲ್ಲಿ ಸುಮಾರು 20 ಲಕ್ಷ ಉದ್ಯೋಗ ಸೃಷ್ಟಿಸಲು ಮುಂದಾಗಿದೆ.

ಕಾರ್ಮಿಕ ಸಚಿವಾಲಯ ಈ ಕ್ರಮಕ್ಕೆ ಮುಂದಾಗಿದ್ದು, ಕೇಂದ್ರ ಸಚಿವಾಲಯಗಳು ಹಾಗೂ 244 ಸರಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಉದ್ಯೋಗ ಭರ್ತಿ ನಡೆಯಲಿದೆ.

ಪತ್ರಿಕೋದ್ಯಮ: ಒನ್ಇಂಡಿಯಾದಲ್ಲಿ ಉದ್ಯೋಗಾವಕಾಶ

ಸದ್ಯ ಕೇಂದ್ರದಲ್ಲಿ 4.2 ಲಕ್ಷ ಉದ್ಯೋಗಕ್ಕೆ ಅವಕಾಶವಿದ್ದು ಮಿಕ್ಕ ಹುದ್ದೆಗಳನ್ನು ಭರ್ತಿ ಮಾಡಲು ಎಲ್ಲ ಇಲಾಖೆಗಳಿಗೆ ಪತ್ರ ಬರೆದು ಖಾಲಿ ಇರುವ ಹಾಗೂ ಭರ್ತಿ ಮಾಡಬೇಕಾದ ಹುದ್ದೆಗಳ ಪಟ್ಟಿಯನ್ನು ಕಳುಹಿಸಲು ಸೂಚಿಸಿದೆ.

ಮೊದಲಿಗೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ಉದ್ಯೋಗಗಳನ್ನು ಸೃಷ್ಟಿ ಮಾಡಲು ಸಿದ್ಧತೆ ನಡೆಸಲಾಗಿದೆ. ಪೊಲೀಸ್‌ ಇಲಾಖೆಯಲ್ಲಿ 2 ಲಕ್ಷ, ಶಾಲಾ-ಕಾಲೇಜುಗಳಿಗೆ 2 ಲಕ್ಷ, ಅಂಗನವಾಡಿ ಕಾರ್ಯಕರ್ತರು 2 ಲಕ್ಷ, ರೈಲ್ವೆ ಇಲಾಖೆ 2.4 ಲಕ್ಷ, ಆದಾಯ ತೆರಿಗೆ ಇಲಾಖೆಯಲ್ಲಿ 32 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

English summary
Central government decides to fill 20 Lakh Posts Across Central and State Governments.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia