ವೃತ್ತಿಪರ ಶಿಕ್ಷಣ ಕೌನ್ಸೆಲಿಂಗ್ ಶೇ.50 ಸೀಟುಗಳು ಕನ್ನಡಿಗರಿಗೆ

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶದಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಶೇ 50ರಷ್ಟು ಸೀಟು ಮೀಸಲಿಡಲು ಅವಕಾಶ ಕಲ್ಪಿಸುವ 'ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ ತಿದ್ದುಪಡಿ ಮಸೂದೆ' ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರಗೊಂಡಿದೆ.

ಮಸೂದೆಯಲ್ಲಿ ಈ ಬಾರಿ ಕನ್ನಡಿಗರಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗಿದ್ದು, ಶೇ.50 ರಷ್ಟು ಮೀಸಲಾತಿ ನೀಡಲಾಗಿದೆ.

ಕನ್ನಡದವರಿಗೆ ಶೇ.50 ಮೀಸಲು

ನೀಟ್‌ ಪರೀಕ್ಷೆ ಮೆರಿಟ್‌ ಆಧಾರದಲ್ಲಿ ರಾಜ್ಯಕ್ಕೆ ಲಭ್ಯವಾಗುವ ಒಟ್ಟು ಸೀಟುಗಳಲ್ಲಿ ಶೇ 50ರಷ್ಟನ್ನು ಕನ್ನಡಿಗರಿಗೆ ಮತ್ತು ಉಳಿದ ಶೇ50ರಷ್ಟು ಸೀಟುಗಳನ್ನು ಅಖಿಲ ಭಾರತ ಕೋಟಾಕ್ಕೆ ನೀಡಲು ಈ ಮಸೂದೆ ಅವಕಾಶ ಕಲ್ಪಿಸಲಿದೆ. ಈ ಮೂಲಕ ಕನ್ನಡದ ಅಭ್ಯರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ತಿಳಿಸಿದ್ದಾರೆ.

 

ಸೀಟುಗಳ ಸಂಖ್ಯೆ ಹೆಚ್ಚಳ

ಈ ವಿಧೇಯಕದ ಮೂಲಕ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರದ ಪಾಲಿನ ಒಟ್ಟು ಸೀಟುಗಳ ಸಂಖ್ಯೆ ಶೇ.20ರಿಂದ 25ಕ್ಕೆ ಹೆಚ್ಚಲಿದೆ. ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳು ಕೂಡ ಈ ಕಾಯ್ದೆ ವ್ಯಾಪ್ತಿಗೆ ಬರುತ್ತವೆ. ಆ ಸಂಸ್ಥೆಗಳಲ್ಲಿನ ಸರ್ಕಾರಿ ಖೋಟಾ ಕೂಡ ಹೆಚ್ಚುತ್ತದೆ ಎಂದು ಶಿಕ್ಷಣ ಸಚಿವರು ತಿಳಸಿದ್ದಾರೆ.

ಶೇ.50 ಸೀಟುಗಳು ಕನ್ನಡಿಗರಿಗೆ

ಪ್ರತ್ಯೇಕ ಸಿಇಟಿ ಇರುವುದಿಲ್ಲ

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ ರಾಜ್ಯ ಸರ್ಕಾರ, ಖಾಸಗಿ ಸಂಸ್ಥೆಗಳು ಪ್ರತ್ಯೇಕ ಸಿಇಟಿ ಪರೀಕ್ಷೆ ನಡೆಸುವುದಿಲ್ಲ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಎನ್‌ಇಇಟಿ) ಮಾತ್ರ ನಡೆಯುತ್ತದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೀಟುಗಳ ಹಂಚಿಕೆ ಮಾಡಲಿದ್ದು,ಕಾಮೆಡ್-ಕೆ ಆಗಲಿ ಡೀಮ್ಡ್ ವಿವಿಗಳಾಗಲಿ ಪ್ರತ್ಯೇಕ ಕೌನ್ಸೆಲಿಂಗ್ ಇರುವುದಿಲ್ಲ ಎನ್ನುವುದನ್ನು ಕೂಡ ಸ್ಪಷ್ಟಪಡಿಸಿದ್ದಾರೆ.

 

ಕಳೆದ ವರ್ಷದಿಂದಲೇ ವೃತ್ತಿ ಶಿಕ್ಷಣ ಕೋರ್ಸ್​ಗಳಿಗೆ ನೀಟ್ ಪರೀಕ್ಷೆ ನಡೆಯುತ್ತಿದೆ. ಆ ಮೂಲಕವೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಈಗ ಅದನ್ನು ಕಡ್ಡಾಯ ಗೊಳಿಸಲು ನಾವು ಉದ್ದೇಶಿಸಿದ್ದೇವೆ. ಅದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತಂದು ನಿಯಮಗಳನ್ನು ಹೊಸದಾಗಿ ರೂಪಿಸಬೇಕಾಗಿದೆ. ಅದಕ್ಕಾಗಿ ಈ ವಿಧೇಯಕವನ್ನು ಮಂಡಿಸಲಾಗಿದೆ ಎಂದರು. ಇನ್ನು ಸರ್ಕಾರಿ, ಖಾಸಗಿ, ಡೀಮ್ಡ್‌ ಮತ್ತು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಸೀಟುಗಳ ಭರ್ತಿಗೆ ಇನ್ನು ಮುಂದೆ ಕೇಂದ್ರೀಕೃತ ಕೌನ್ಸೆಲಿಂಗ್‌ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಶುಲ್ಕ ನಿಗದಿ ಸಾಧ್ಯವಿಲ್ಲ

ಪ್ರತಿ ಬಾರಿ ಪ್ರವೇಶಾತಿ ವೇಳೆ ಡೀಮ್ಡ್ ವಿವಿಗಳ ಶುಲ್ಕಕ್ಕೆ ಸಂಬಂಧಿಸಿದಂತೆ ಚರ್ಚೆಗಳು ಆಗುತ್ತಲೆ ಇವೆ. ಇದನ್ನು ಗಮನದಲ್ಲಿಟ್ಟು ಸಚಿವರು ಡೀಮ್ಡ್ ವಿವಿಗಳು ಯುಜಿಸಿ ಅಡಿಯಲ್ಲಿ ಬರುವುದರಿಂದ ರಾಜ್ಯ ಸರ್ಕಾರ ಹಸ್ತಕ್ಷೇಪ ನಡೆಸಲು ಸಾಧ್ಯವಿಲ್ಲ ಹಾಗಾಗಿ ರಾಜ್ಯ ಸರ್ಕಾರ ಶುಲ್ಕ ನಿಗದಿಪಡಿಸಲು ಸಾಧ್ಯ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನು ಗಮನಿಸಿ: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶ ಪರೀಕ್ಷೆ

For Quick Alerts
ALLOW NOTIFICATIONS  
For Daily Alerts

English summary
Karnataka Examinations Authority will conduct centralised counselling for post-graduate medical and dental courses for 2017-18 across all categories including those in government, private, minority and deemed university colleges.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X