Reservation For Medical Education : ಶೆ.27ರಷ್ಟು ಓಬಿಸಿ, ಶೆ.10ರಷ್ಟು ಅರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಘೋಷಣೆ

ಶೈಕ್ಷಣಿಕ ವರ್ಷದಲ್ಲಿ ವೈದ್ಯಕೀಯ ಕೋರ್ಸ್ ಗೆ ಮೀಸಲಾತಿ ಕುರಿತು ಮಹತ್ವದ ನಿರ್ಧಾರ

ವೈದ್ಯಕೀಯ ಕೋರ್ಸ್ ಗಳಿಗೆ ಸೇರಬಯಸುವ ಒಬಿಸಿ ವಿದ್ಯಾರ್ಥಿಗಳಿಗೆ ಶೇ.27ರಷ್ಟು ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶೆ.10ರಷ್ಟು ಮೀಸಲಾತಿ ನೀಡಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

 

ಪ್ರಧಾನಿ ನರೇಂದ್ರ ಮೋದಿ ಜುಲೈ 26 ರಂದು ನಡೆಸಿದ ಸಭೆಯಲ್ಲಿ ದೀರ್ಘಕಾಲದವರೆಗೆ ಬಾಕಿ ಇರುವ ಈ ಸಮಸ್ಯೆಗೆ ಪರಿಣಾಮಕಾರಿ ಪರಿಹಾರವನ್ನು ಒದಗಿಸಲು ಸಂಬಂಧಪಟ್ಟ ಸಚಿವಾಲಯಗಳಿಗೆ ನಿರ್ದೇಶನ ನೀಡಿದ್ದರು. ಅವರ ಮಾರ್ಗದರ್ಶನದ ಮೇರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮೀಸಲಾತಿ ಘೋಷಿಸಿದೆ.

ಆಲ್ ಇಂಡಿಯಾ ಕೋಟಾದಡಿ ಬರುವ ಎಲ್ಲ ಸ್ನಾತಕೋತ್ತರ ವೈದ್ಯಕೀಯ ಕಾಲೇಜುಗಳಲ್ಲಿ ಓಬಿಸಿ ವಿದ್ಯಾರ್ಥಿಗಳಿಗೆ ಶೇ. 27ರಷ್ಟು ಮತ್ತು ಆರ್ಥಿಕವಾಗಿ ಹಿಂದುಳಿದಿರುವವರಿಗೆ ಶೇ. 10ರಷ್ಟು ಮೀಸಲಾತಿ ನೀಡಲಾಗುವುದು. ಪ್ರಸಕ್ತ ಶೈಕ್ಷಣಿಗೆ ವರ್ಷ 2021-22 ರಿಂದ ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ, ದಂತ ಕೋರ್ಸ್ (ಎಂಬಿಬಿಎಸ್ / ಎಂಡಿ / ಎಂಎಸ್ / ಡಿಪ್ಲೊಮಾ / ಬಿಡಿಎಸ್ / ಎಂಡಿಎಸ್) ಕೋರ್ಸ್‌ಗಳಿಗೆ ಸೇರಲಿರುವ ವಿದ್ಯಾರ್ಥಿಗಳಿಗೆ ಈ ಮೀಸಲಾತಿ ಅನ್ವಯವಾಗಲಿದೆ.

ಈ ಮೀಸಲಾತಿಯಿಂದಾಗಿ ಎಂಬಿಬಿಎಸ್​ನ 1,500 ಒಬಿಸಿ (OBC) ಅಭ್ಯರ್ಥಿಗಳು, ಸ್ನಾತಕೋತ್ತರ ವಿಭಾಗದ 2,500 ಒಬಿಸಿ ವಿದ್ಯಾರ್ಥಿಗಳು, ಎಂಬಿಬಿಎಸ್​ನ ಆರ್ಥಿಕವಾಗಿ ಹಿಂದುಳಿದ (EWS) 550 ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿಭಾಗದ 1000 ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

For Quick Alerts
ALLOW NOTIFICATIONS  
For Daily Alerts

English summary
Central government taken decision 27% for OBC, 10% for EWS reservation in all india quota scheme for medical education.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X