ಸಿಇಟಿ: ಆಯುಷ್, ಕೃಷಿ ವಿಜ್ಞಾನ ಮತ್ತು ಪಶು ವೈದ್ಯ ವಿಜ್ಞಾನ ಸೀಟು ಹಂಚಿಕೆ ಪ್ರಕ್ರಿಯೆ ಪ್ರಾರಂಭ

ಕಾಲೇಜುವಾರು, ಕೋರ್ಸುವಾರು ಮತ್ತು ಕ್ಯಾಟಗರಿವಾರು ವಿವರಗಳುಳ್ಳ ಸೀಟ್ ಮ್ಯಾಟ್ರಿಕ್ಸ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೋರ್ಸ್‌ವಾರು ಲಭ್ಯತಾ ಸೀಟುಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಆಯುಷ್, ಕೃಷಿ ವಿಜ್ಞಾನ ಮತ್ತು ಪಶು ವೈದ್ಯ ವಿಜ್ಞಾನ ಕೋರ್ಸ್‌ಗಳಿಗೆ ಆನ್‌ಲೈನ್ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ.

ಈ ಹಿಂದೆ ನಡೆಸಿದ ಕೌನ್ಸೆಲಿಂಗ್‌ನಲ್ಲಿ ಸೀಟು ರದ್ದುಪಡಿಸಿಕೊಂಡ, ಹೊಸದಾಗಿ ಸೇರ್ಪಡೆಯಾದ ಮತ್ತು ಕಾಲೇಜಿಗೆ ಪ್ರವೇಶ ಪಡೆಯದೆ ಇರುವ ಸೀಟುಗಳಿಗೆ ಕೌನ್ಸೆಲಿಂಗ್ ನಡೆಸಲಾಗುತ್ತಿದ್ದು, 2017 ನೇ ಸಾಲಿನಲ್ಲಿ ರ್ಯಾಂಕ್ ಪಡೆದಿರುವ ಅಭ್ಯರ್ಥಿಗಳಿಗೆ ಈ ಸುತ್ತಿನಲ್ಲಿ ವೇಳಾಪಟ್ಟಿಯಂತೆ ಆಯ್ಕೆಗೆ ಅವಕಾಶ ಕಲ್ಪಿಸಲಾಗುವುದು.

ಕಾಲೇಜುವಾರು, ಕೋರ್ಸುವಾರು ಮತ್ತು ಕ್ಯಾಟಗರಿವಾರು ವಿವರಗಳುಳ್ಳ ಸೀಟ್ ಮ್ಯಾಟ್ರಿಕ್ಸ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೋರ್ಸ್‌ವಾರು ಲಭ್ಯತಾ ಸೀಟುಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಸಿಇಟಿ ಸೀಟು ಹಂಚಿಕೆ

ಆಯ್ಕೆಗಳನ್ನು ದಾಖಲಿಸಲು (ಆಪ್ಷನ್ ಎಂಟ್ರಿ) ಇದೇ 18ರ ಬೆಳಿಗ್ಗೆ 11ರವರೆಗೆ ಅವಕಾಶ ಇದೆ. ಅಂದು ಸಂಜೆ 6ಕ್ಕೆ ಸೀಟು ಹಂಚಿಕೆ ಮಾಡಲಾಗುತ್ತದೆ. ಸೀಟು ಆಯ್ಕೆ ಮಾಡಿಕೊಂಡು ಶುಲ್ಕ ಪಾವತಿಸಲು ಆಗಸ್ಟ್‌ 20ರಿಂದ 22ರವರೆಗೆ ಅವಕಾಶ ಇದೆ ಎಂದು ಪ್ರಕಟಣೆ ತಿಳಿಸಿದೆ.

ಈ ಸುತ್ತಿನಲ್ಲಿ ಅಭ್ಯರ್ಥಿಗಳು ಹೊಸದಾಗಿ ಆಯ್ಕೆಯನ್ನು ದಾಖಲಿಸಬೇಕು. ಈ ಮೊದಲು ದಾಖಲಿಸಿದ್ದ ಆಪ್ಷನ್ ಗಳನ್ನು ಪರಿಗಣಿಸಲಾಗುವುದಿಲ್ಲ.

ಈಗಾಗಲೇ ಕಾಲೇಜುಗಳಲ್ಲಿ ಪ್ರವೇಶ ಪಡೆದಿರುವ ಅಭ್ಯರ್ಥಿಗಳು ಆಸಕ್ತಿ ಇದ್ದರೆ ಮಾತ್ರ ಮತ್ತು ನಿಗದಿತ ದಿನಾಂಕದೊಳಗೆ ಮೂಲ ದಾಖಲಾತಿಗಳನ್ನು ತಾವು ಅಭ್ಯಸಿಸುತ್ತಿರುವ ಕಾಲೇಜುಗಳಿಂದ ಪಡೆಯುವುದನ್ನು ಖಾತ್ರಿಪಡಿಸಿಕೊಂಡು ಈ ಸುತ್ತಿನಲ್ಲಿ ಭಾಗವಹಿಸಲು ಸೂಚಿಸಿದೆ.

ಈ ಸುತ್ತಿನಲ್ಲಿ ಸೀಟು ಹಂಚಿಕೆಯಾದ ತಕ್ಷಣ ಹಿಂದಿನ ಸುತ್ತುಗಳಲ್ಲಿ ಹಂಚಿಕೆಯಾಗಿದ್ದ ಸೀಟು ರದ್ದುಗೊಳ್ಳುತ್ತದೆ ಮತ್ತು ಯಾವುದೇ ಕಾರಣಕ್ಕೂ ಆ ಸೀಟುಗಳನ್ನು ಹಿಂಪಡೆಯಲು ಸಾಧ್ಯವಾಗುವುದಿಲ್ಲ.

ಈ ಸುತ್ತಿನಲ್ಲಿ ಹಂಚಿಕೆಯಾಗುವ ಕಾಲೇಜಿಗೆ ಅಭ್ಯರ್ಥಿಯು ಕಡ್ಡಾಯವಾಗಿ ಪ್ರವೇಶವನ್ನು ಪಡೆಯಬೇಕು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
CET 2017 ISHM, agriculture and veterinary seats which are cancelled, newly added, identified as not reported if any, will be offered in this round. Seat matrix is hosted on KEA website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X