ಸಿಇಟಿ 2017ರ ಕೀ ಉತ್ತರ ಪ್ರಕಟ, 27ಕ್ಕೆ ರಿಸಲ್ಟ್

Posted By:

ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಿನ್ನೆಗೆ ಮುಗಿದಿದ್ದು, ಎಲ್ಲಾ ವಿಷಯಗಳ ತಾತ್ಕಾಲಿಕ ಸರಿ ಉತ್ತರಗಳನ್ನು (ಕೀ ಉತ್ತರ) ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದೆ.

ವಿದ್ಯಾರ್ಥಿಗಳು ಪರೀಕ್ಷಾ ಪ್ರಾಧಿಕಾದ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ರಾಜ್ಯಾದ್ಯಂತ ಪರೀಕ್ಷೆಯನ್ನು ಒಟ್ಟು 404 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಒಟ್ಟು 1,85,411 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿದ್ದರು.

ಸಿಇಟಿ ಕೀ ಉತ್ತರ ಪ್ರಕಟ

2016ನೇ ಸಾಲಿಗೆ ಆನ್‌ಲೈನ್‌ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ತಿದ್ದುಪಡಿ ಮಾಡಬೇಕಿದ್ದಲ್ಲಿ ಮೇ 12ರವರೆಗೆ ಅವಕಾಶ ಕಲ್ಪಿಸಲಾಗಿದೆ. 'ಸಿಇಟಿ ಸಂಪೂರ್ಣ ವೇಳಾಪಟ್ಟಿ ಪ್ರಕಾರವೇ ನಡೆಯುತ್ತಿದೆ. ಮೇ 9ರ ಬದಲು ಶುಕ್ರವಾರವೇ ಕೀ ಉತ್ತರ ಪ್ರಕಟಿಸಲಾಗಿದೆ. ಮೇ 27ರಂದು ಫಲಿತಾಂಶ ಪ್ರಕಟಿಸಲಾಗುವುದು' ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆಡಳಿತಾಧಿಕಾರಿ ಎಸ್‌.ಎನ್‌. ಗಂಗಾಧರಯ್ಯ ತಿಳಿಸಿದ್ದಾರೆ.

ಮೇ 27ಕ್ಕೆ ಫಲಿತಾಂಶ ನೀಡುವ ಸಾಧ್ಯತೆ

ಭೌತವಿಜ್ಞಾನ, ಗಣಿತ, ಜೀವವಿಜ್ಞಾನ ಮತ್ತು ರಸಾಯನವಿಜ್ಞಾನ ವಿಷಯಗಳ ಕೀ ಉತ್ತರಗಳನ್ನು ವೆಬ್‌ಸೈಟ್‌ kea.kar.nic.in ನಲ್ಲಿ ನೋಡಬಹುದು. ವಿಷಯವಾರು ಮಾಸ್ಟರ್ ಪ್ರಶ್ನೆಪತ್ರಿಕೆ ಮತ್ತು ಅದಕ್ಕೆ ಸಂಬಂಧಿಸಿದ ತಾತ್ಕಾಲಿಕ ಸರಿ ಉತ್ತರಗಳನ್ನು ಮಾಸ್ಟರ್ ಪ್ರಶ್ನೆಪತ್ರಿಕೆಯೊಂದಿಗೆ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಾತ್ಕಾಲಿಕ ಸರಿ ಉತ್ತರಗಳನ್ನು ತಮ್ಮ ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆ ಸಂಖ್ಯೆಗೆ ಅನುಗುಣವಾಗಿ ಪರಿಶೀಲಿಸಲು ಸೂಚಿಸಿದೆ. ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಏನಾದರು ಆಕ್ಷೇಪಣೆಗಳಿದ್ದಲ್ಲಿ ಇ-ಮೇಲ್ ಮೂಲಕ ಸಲ್ಲಿಸಬಹುದಾಗಿದೆ.

ಕೀ ಉತ್ತರಗಳನ್ನು ಪಡೆಯುವ ವಿಧಾನ

  • ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ kea.kar.nic.in ಗೆ ಬೇಟಿ ನೀಡಿ
  • ಬಲಭಾಗದಲ್ಲಿ ಕಾಣುವ ಸಿಟಿಟಿ-2017 ಬಟನ್ ಮೇಲೆ ಕ್ಲಿಕ್ ಮಾಡಿ
  • ಪ್ರಾವಿಷನಲ್ ಆನ್ಸರ್ ಕೀ ಮೇಲೆ ಕ್ಲಿಕ್ ಮಾಡಿ
  • ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಿ

ಕೀ ಉತ್ತರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಕಟಿಸಿರುವ ತಾತ್ಕಾಲಿಕ ಸರಿ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಆಧಾರ ಸಹಿತ ಆಕ್ಷೇಪಣೆಗಳನ್ನು ಇ-ಮೇಲ್ keauthority‐ka@nic.in ವಿಳಾಸಕ್ಕೆ ದಿನಾಂಕ 10-05-2017 ಸಂಜೆ 5.30 ಗಂಟೆಯೊಳಗಾಗಿ ಕಳುಹಿಸಬಹುದಾಗಿದೆ.

ಅಭ್ಯರ್ಥಿಗಳು ಆಕ್ಷೇಪಣೆಗಳನ್ನು ಸಲ್ಲಿಸುವಾಗ ವಿಷಯದ ಹೆಸರು, ಮಾಸ್ಟರ್ ಪ್ರಶ್ನೆ ಪತ್ರಿಕೆಯ ಪ್ರಶ್ನೆ ಸಂಖ್ಯೆ ಮತ್ತು ನಿರ್ದಿಷ್ಟವಾದ ನಿಗದಿತ ಆಕ್ಷೇಪಣೆಯನ್ನು ಎಲ್ಲಾ ವಿವರಗಳೊಂದಿಗೆ ಸಲ್ಲಿಸಲು ಸೂಚಿಸಲಾಗಿದೆ.

ಸೂಚನೆ:ಮಾಸ್ಟರ್ ಪ್ರಶ್ನೆ ಸಂಖ್ಯೆಯನ್ನು ನಮೂದಿಸದೆ ಅಥವಾ ಆಧಾರ ರಹಿತ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ವಿಷಯ ತಜ್ಞರ ಸಮಿತಿಯು ನಿರ್ಧರಿಸಿ ನೀಡುವ ಕೀ ಉತ್ತರಗಳು ಅಂತಿಮವಾಗಿರುತ್ತದೆ.

English summary
The answer key for Karnataka Common Entrance Test (KCET) 2017, has been released by KEA

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia