ಈ ವರ್ಷದ ಮೊದಲ ದಿನದ ಸಿಇಟಿ ಪರೀಕ್ಷೆ ಇಂದು ಯಶಸ್ವಿಯಾಗಿ ನೆರವೇರಿದೆ. ಆರೋಗ್ಯ ಇಲಾಖೆ ಮತ್ತು ಹೈಕೋರ್ಟ್ ನ ಮಾರ್ಗಸೂಚಿಯಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಂಡು ಮೊದಲ ದಿನದ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲಾಗಿದೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ಭೀತಿ ನಡುವೆಯೂ ಇಂದು ಮೊದಲ ದಿನದ ಸಿಇಟಿ ಪರೀಕ್ಷೆ ನಿರಾತಂಕವಾಗಿ ನಡೆದಿದೆ. ರಾಜ್ಯದಲ್ಲಿ ಒಟ್ಟು 1,94,356 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದರು ಈ ಪೈಕಿ ಪರೀಕ್ಷೆಗೆ 1,47,491 ವಿದ್ಯಾರ್ಥಿಗಳು ಹಾಜರಾಗಿದ್ದರು.
ಪರೀಕ್ಷೆಗೆ ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿಗೂ ಹಾಜರಾಗಲು ಅವಕಾಶ ಕಲ್ಪಿಸಲಾಗಿತ್ತು. ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆಯನ್ನು ಮಾಡಲಾಗಿತ್ತು. ಒಟ್ಟಾರೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಮೊದಲ ದಿನದ ಪರೀಕ್ಷೆ ಮುಕ್ತಾಯಗೊಂಡಿದೆ. ವಿದ್ಯಾರ್ಥಿಗಳು ಕೊಂಚ ರಿಲ್ಯಾಕ್ಸ್ ಆಗಿದ್ದಾರೆ.
For Quick Alerts
For Daily Alerts


Click it and Unblock the Notifications











