ಕೇಂದ್ರ ಕೈಗಾರಿಕಾ ಭದ್ರತಾ ಪಡೆಯು (ಸಿಐಎಸ್ಎಫ್) ಕಾನ್ಸ್ಟೇಬಲ್ ಮತ್ತು ಟ್ರೇಡ್ಸ್ ಮೆನ್ ಹುದ್ದೆಗಳ ನೇಮಕಾತಿಗೆ ನಡೆಸುವ ಪ್ರವೇಶ ಪರೀಕ್ಷೆಯ ದಿನಾಂಕವನ್ನು ಮುಂದೂಡಿದೆ.
ಕೇಂದ್ರ ಕೈಗಾರಿಕಾ ಭದ್ರತಾ ಪಡೆಯು 2019 ರ ಸೆಪ್ಟೆಂಬರ್ ನಲ್ಲಿ 914 ಕಾನ್ಸ್ಟೇಬಲ್ ಮತ್ತು ಟ್ರೇಡ್ಸ್ ಮೆನ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿತ್ತು. ಈ ಹುದ್ದೆಗಳಿಗೆ ಈ ಹಿಂದೆ ಜೂನ್ 7,2020ರಂದು ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಆದರೆ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿದ್ದು ಸೆಪ್ಟೆಂಬರ್ 6,2020ರಂದು ಪರೀಕ್ಷೆ ನಡೆಸುವುದಾಗಿ ತಿಳಿಸಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪರೀಕ್ಷೆಯ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಬಹುದು.
ಅಭ್ಯರ್ಥಿಗಳು ಪರೀಕ್ಷೆ ಮುಂದೂಡಿಕೆಯ ಪ್ರಕಟಣೆಯನ್ನು ಓದಲು ಮುಂದೆ ನೋಡಿ.
For Daily Alerts