ಸಿವಿಲ್ ನ್ಯಾಯಾಧೀಶರ ಹುದ್ದೆ ಪರೀಕ್ಷೆ ತೆಗೆದುಕೊಂಡಿರುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಉಚಿತ ಪೂರ್ವಭಾವಿ ಪರೀಕ್ಷಾ ತರಬೇತಿ.
2016 -17 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ರಾಜ್ಯದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನಡೆಯುವ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವಭಾವಿ ತರಬೇತಿ ಆಯ್ಕೆ ಮಾಡುವ ಸಂಬಧ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
2016 -17 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೆರಿಟ್ ಆಧಾರದ ಮೇಲೆ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನಡೆಯುವ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡಿ ಉಚಿತವಾಗಿ ಗರಿಷ್ಠ 3 ತಿಂಗಳ ತರಬೇತಿಯನ್ನು ನೀಡಲಾಗುವುದು.
ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನಡೆಯುವ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವಭಾವಿ ತರಬೇತಿಗಾಗಿ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ, ಕಾನೂನು ಪದವಿಯಲ್ಲಿ (ಎಲ್ ಎಲ್ ಬಿ) ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು. ಸದರಿ ಅಭ್ಯರ್ಥಿಗಳಿಗೆ ಶಿಷ್ಯವೇತನವನ್ನು ಸರ್ಕಾರದಿಂದ ಮಂಜೂರಾದ ದರದಲ್ಲಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಪಾವತಿಸಲಾಗುವುದು.
ಕೋರ್ಸ್ ವಿವರ
ಕರ್ನಾಟಕ ರಾಜ್ಯ ಸರ್ಕಾರದ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ನೇಮಕಾತಿ ಪಡೆಯಲು ಪರೀಕ್ಷಾ ಪೂರ್ವಭಾವಿ ತರಬೇತಿ
ತರಬೇತಿ ಅವಧಿ: ಗರಿಷ್ಠ ಮೂರು ತಿಂಗಳು
ಅರ್ಜಿ ಸಲ್ಲಿಸುವ ವಿಳಾಸ
ಅರ್ಜಿಯನ್ನು ನೇರವಾಗಿ ಜಂಟಿ ನಿರ್ದೇಶಕರು/ ಪ್ರಾಚಾರ್ಯರು, ಪರೀಕ್ಷಾ ಪೂರ್ವ ತರಬೇತಿ ಕೇಂದ್ರ ಡಾ.ಬಿ.ಆರ್ ಅಂಬೇಡ್ಕರ್ ಭವನ, ವಸಂತನಗರ, ಮಿಲ್ಲರ್ಸ್ ರಸ್ತೆ. ಬೆಂಗಳೂರು ಇಲ್ಲಿಗೆ ದೃಡೀಕೃತ ದಾಖಲಾತಿಗಳೊಂದಿಗೆ ನೀಡುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26-03-2017
ಹೆಚ್ಚಿನ ವಿವರಗಳಿಗೆ ಇಲಾಖೆಯ ವೆಬ್ಸೈಟ್ http://sw.kar.nic.in/ ನೋಡವುದು
ಸೂಚನೆ
- ಅಭ್ಯರ್ಥಿಗಳು ಮ್ಯಾನುವಲ್ ಅರ್ಜಿಯೊಂದಿಗೆ ಕಾನೂನು ಪದವಿ (ಎಲ್ ಎಲ್ ಬಿ) ಪ್ರಮಾಣ ಪತ್ರ/ಅಂಕಪಟ್ಟಿ, ಬಾರ್ ಕೌನ್ಸಿಲ್ ನಲ್ಲಿ ನೋಂದಣಿಯಾದ ಪ್ರಮಾಣಪತ್ರ, 10 ನೇ ತರಗತಿ ಅಂಕಪಟ್ಟಿ, ಜಾತಿ ಪ್ರಮಾಣಪತ್ರ, ಭಾವಚಿತ್ರ-3 , ಹಾಗೂ ಕುಟುಂಬದ ಆದಾಯ ಪ್ರಮಾಣಪತ್ರ (ಕುಟುಂಬದ ಸದಸ್ಯರು ಸೇವೆಯಲ್ಲಿದ್ದರೆ ವೇತನ ಪ್ರಮಾಣ ಪತ್ರ ನೀಡುವುದು)
- ಈಗಾಗಲೇ ಈ ಕೇಂದ್ರದ ಮೂಲಕ ಯು.ಪಿ.ಎಸ್.ಸಿ/ಕೆ.ಪಿ.ಎಸ್.ಸಿ/ಕೆ.ಎ.ಎಸ್/ಗ್ರೂಪ್-ಸಿ ಹಾಗೂ ಬ್ಯಾಂಕಿಂಗ್ ಪರೀಕ್ಷೆಯ ತರಬೇತಿಗೆ ಆಯ್ಕೆಯಾಗಿ ತರಬೇತಿ ಪಡೆದಿದ್ದಲ್ಲಿ ಅವರಿಗೆ ಈ ತರಬೇತಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-03-2017
ಇದನ್ನು ಗಮನಿಸಿ: ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ 167 ಸಿವಿಲ್ ನ್ಯಾಯಾಧೀಶರ ಹುದ್ದೆ