1 ರಿಂದ 10ನೇ ತರಗತಿವರೆಗಿನ ಪಠ್ಯಪುಸ್ತಕಗಳ ಉಚಿತ ಪಿಡಿಎಫ್ ಲಭ್ಯ

ಪ್ರಸ್ತುತ ದಿನಗಳಲ್ಲಿ ಲಾಕ್‌ಡೌನ್‌ನಿಂದಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳು ಇತ್ತ ಯಾವುದೇ ಕೋಚಿಂಗ್ ಸೆಂಟರ್‌ಗೆ ಹೋಗಲು ಅವಕಾಶವಿಲ್ಲ. ಅಲ್ಲದೇ ಯಾವುದೇ ಸಾರ್ವಜನಿಕ ಗ್ರಂಥಾಲಯಗಳಿಗೂ ಹೋಗುವ ಅವಕಾಶವಿಲ್ಲ ಹಾಗಾಗಿ ಇಂತಹ ಸಮಯದಲ್ಲಿ ಎಲ್ಲವೂ ಹಾರ್ಡ್‌ಕಾಪಿ ಬೇಕೆಂದರೆ ಸ್ವಲ್ಪ ಕಷ್ಟವೇ. ಅದರ ಬದಲು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗಳಲ್ಲಿ 1 ರಿಂದ 10 ನೇ ತರಗತಿವರೆಗಿನ ಕರ್ನಾಟಕ ರಾಜ್ಯ ಪಠ್ಯಕ್ರಮದ ಪುಸ್ತಕಗಳನ್ನು ಉಚಿತವಾಗಿ ಪಿಡಿಎಫ್ ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ನಿಮಗೆ ಅಗತ್ಯವಿರುವ ಭಾಷೆಯಲ್ಲಿ ಪಿಡಿಎಫ್ ಡೌನ್‌ಲೋಡ್ ಮಾಡಿಕೊಂಡು ಅಧ್ಯಯನ ಮಾಡಬಹುದು.

1 ರಿಂದ 10ನೇ ತರಗತಿಗಳ ಪಠ್ಯಪುಸ್ತಕಗಳ ಪಿಡಿಎಫ್ ಡೌನ್‌ಲೋಡ್ ಮಾಡುವುದು ಹೇಗೆ?

ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಎಫ್‌ಡಿಎ, ಎಸ್‌ಡಿಎ, ಕೆಎಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಸಿಕ್‌ ಮಾಹಿತಿಯನ್ನು ತಿಳಿಯಲು 1 ರಿಂದ 10ನೇ ತರಗತಿ ವರೆಗಿನ ಪಠ್ಯಪುಸ್ತಕಗಳನ್ನು ಓದಬೇಕು ಹಾಗಾಗಿ ಇಲ್ಲಿ ಉಚಿತವಾಗಿ ಪಿಡಿಎಫ್ ಲಭ್ಯವಿದ್ದು ಅಭ್ಯರ್ಥಿಗಳು ಸದುಪಯೋಗಪಡಿಸಿಕೊಳ್ಳಬಹುದು.

ಕನ್ನಡ ಪಠ್ಯಪುಸ್ತಕಗಳ ಪಿಡಿಎಫ್‌ ಡೌನ್‌ಲೋಡ್‌ ಮಾಡುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು 'ಕರ್ನಾಟಕ ಪಠ್ಯಪುಸ್ತಕ ಸಂಘ(ರಿ) ಬೆಂಗಳೂರು' ಅಧಿಕೃತ ವೆಬ್‌ಸೈಟ್‌ http://www.ktbs.kar.nic.in/ ಗೆ ಭೇಟಿ ನೀಡಿ. -
ಸ್ಟೆಪ್ 2: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ 'Text Book Online' ಎಂಬ ಲಿಂಕ್‌ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ಮತ್ತೊಂದು ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ 'Text Book' ಎಂಬಲ್ಲಿ ಕ್ಲಿಕ್ ಮಾಡಿ.
ಸ್ಟೆಪ್ 4: ಈಗ 1 ರಿಂದ 10ನೇ ತರಗತಿವರೆಗೆ ಎಲ್ಲಾ ವಿಷಯಗಳ ಪಠ್ಯಪುಸ್ತಕಗಳನ್ನು ಡೌನ್‌ಲೋಡ್‌ ಮಾಡಿಳ್ಳುವ ಆಯ್ಕೆಗಳು ಲಭ್ಯವಾಗುವುದು
ಸ್ಟೆಪ್ 5: ತರಗತಿ, ಮಾಧ್ಯಮ ಮತ್ತು ವಿಷಯ ಎಂಬ ಮೂರು ಆಯ್ಕೆಗಳನ್ನು ಆಯ್ಕೆ ಮಾಡಿಕೊಳ್ಳಿ ನಂತರ ಡೌನ್‌ಲೋಡ್ ಗೆ ನೀಡಿದ ಲಿಂಕ್‌ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6: ನೀವು ಆಯ್ಕೆ ಮಾಡಿದ ಪಠ್ಯಪುಸ್ತಕ ಯಶಸ್ವಿಯಾಗಿ ಡೌನ್‌ಲೋಡ್‌ ಆಗುತ್ತದೆ

ಅಭ್ಯರ್ಥಿಗಳು ಪಠ್ಯಪುಸ್ತಕಗಳನ್ನು ಡೌನ್‌ಲೋಡ್ ಮಾಡಿಕೊಂಡ ನಂತರ ಪ್ರಿಂಟ್‌ ತೆಗೆದುಕೊಳ್ಳಬಹುದು.

For Quick Alerts
ALLOW NOTIFICATIONS  
For Daily Alerts

English summary
Class 1 to class 10 text books are available in pdf. people can get it from official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X