ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಕ್ಲಾಟ್) 2020: ಮತ್ತೊಮ್ಮೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕಾನೂನು ಅಧ್ಯಯನಕ್ಕಾಗಿ ನಡೆಯುವ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ 2020 (ಕ್ಲಾಟ್)ಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ಜುಲೈ 1ರ ವರೆಗೆ ವಿಸ್ತರಿಸಲಾಗಿದೆ. ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಲು ವಿಫಲರಾದ ಅಭ್ಯರ್ಥಿಗಳಿಗಾಗಿ ಮತ್ತೊಮ್ಮೆ ಈ ಅವಕಾಶ ನೀಡಲಾಗಿದೆ.

ಕ್ಲಾಟ್ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಅವಧಿ ಜುಲೈ 1ರ ವರೆಗೆ ವಿಸ್ತರಣೆ

ಪೆನ್ನು ಪೇಪರ್ ಮಾದರಿಯ ಪರೀಕ್ಷೆ ಇದಾಗಿದ್ದು, ಈ ಮುಂಚೆ ಮಾರ್ಚ್ 31,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಆದರೆ ದೇಶದೆಲ್ಲೆಡೆ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆಯ ಅವಧಿಯನ್ನು ಏಪ್ರಿಲ್ 25,2020ರ ವರೆಗೆ ವಿಸ್ತರಿಸಲಾಗಿತ್ತು. ಆದರೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅಭ್ಯರ್ಥಿಗಳು ಜುಲೈ 1ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ದೇಶದ ಪ್ರತಿಷ್ಠಿತ 23 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಲ್ಲಿ (ಎನ್ಎಲ್ಯು) 5 ವರ್ಷದ ಇಂಟಿಗ್ರೇಟೆಡ್ ಕಾನೂನು ಪದವಿ ಮತ್ತು ಸ್ನಾತಕೋತ್ತರ ಪದವಿ (ಎಲ್ಎಲ್ಎಂ) ಕೋರ್ಸ್ಗಳಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.

ವಿದ್ಯಾರ್ಹತೆ:

ಯು ಜಿ ಕೋರ್ಸ್ ಗೆ ಪ್ರವೇಶ ಪಡೆಯಲು ಅಭ್ಯರ್ಥಿಗಳು ಹನ್ನೆರಡನೇ ತರಗತಿ ಉತ್ತೀರ್ಣರಾಗಿರಬೇಕು. ಪಿ ಜಿ ಕೋರ್ಸಿಗೆ ಅಭ್ಯರ್ಥಿಗಳು ಎಲ್ ಎಲ್ ಬಿ/ಐದು ವರ್ಷದ ಇಂಟಿಗ್ರೇಟೆಡ್ ಎಲ್ ಎಲ್ ಬಿ (ಹಾನರ್ಸ್) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕ್ಲಾಟ್ ಪರೀಕ್ಷೆಗೆ ಯಾವುದೇ ವಯಸ್ಸಿನ ಮಿತಿ ಇಲ್ಲ.

ಸೀಟು ಹಂಚಿಕೆ: ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿಗಳ ಸೀಟು ಹಂಚಿಕೆ ನಡೆಯುತ್ತದೆ. ಮುಖ್ಯವಾಗಿ ವಿದ್ಯಾರ್ಥಿಗಳು ಈ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕದ ಮೇಲೆ ತಮ್ಮದೇ ಆದ ಕಾನೂನು ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ: https://consortiumofnlus.ac.in/

More News  

For Quick Alerts
ALLOW NOTIFICATIONS  
For Daily Alerts

English summary
clat exam 2020 application date again extended to july 1
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+