ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ 2021ರ ಕ್ಲ್ಯಾಟ್ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟ ಮಾಡಲಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.
ಕ್ಲ್ಯಾಟ್ ಕೌನ್ಸೆಲಿಂಗ್ ಗೆ ರಿಜಿಸ್ಟ್ರೇಶನ್ ಪ್ರಕ್ರಿಯೆಯು ನಾಳೆಯಿಂದ ಪ್ರಾರಂಭವಾಗಲಿದ್ದು, ಜುಲೈ 30,2021ರ ವರೆಗೆ ನಡೆಯಲಿದೆ. ಫಲಿತಾಂಶ ಪ್ರಕಟವಾದ ಬಳಿಕ ಅಭ್ಯರ್ಥಿಗಳು ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ಇಲ್ಲಿ ತಿಳಿಯಿರಿ.
ಕ್ಲ್ಯಾಟ್ ಪರೀಕ್ಷಾ ಫಲಿತಾಂಶ ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://clatconsortiumofnlu.ac.in/ ಗೆ ಭೇಟಿ ಕೊಡಿ
ಸ್ಟೆಪ್ 2: ಹೋಂ ಪೇಜ್ನಲ್ಲಿ "ಕ್ಲ್ಯಾಟ್ -2021ರ ಫಲಿತಾಂಶ" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಲಾಗಿನ್ ಪೇಜ್ ಪರದೆ ಮೇಲೆ ಮೂಡುತ್ತದೆ.
ಸ್ಟೆಪ್ 4: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ನೀಡಿ ಲಾಗಿನ್ ಆಗಿ
ಸ್ಟೆಪ್ 5: ಸ್ಕ್ರೀನ್ ಮೇಲೆ ನಿಮ್ಮ ಫಲಿತಾಂಶ ಮೂಡುತ್ತದೆ
ಸ್ಟೆಪ್ 6: ಫಲಿತಾಂಶವನ್ನ ಸೇವ್ ಮಾಡಿಕೊಂಡು, ಪ್ರಿಂಟೌಟ್ ತೆಗೆದುಕೊಳ್ಳಿ
For Quick Alerts
For Daily Alerts