ಕಾನೂನು ಅಧ್ಯಯನಕ್ಕಾಗಿ ನಡೆಯುವ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ 2020 ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟ ಮಾಡಲಾಗಿದೆ.
ಸೆಪ್ಟೆಂಬರ್ 28,2020ರಂದು ಕ್ಲಾಟ್ ಪರೀಕ್ಷೆ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ದೇಶದ ಪ್ರತಿಷ್ಠಿತ 22 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಲ್ಲಿ (ಎನ್ಎಲ್ಯು) 5 ವರ್ಷದ ಇಂಟಿಗ್ರೇಟೆಡ್ ಕಾನೂನು ಪದವಿ ಮತ್ತು ಸ್ನಾತಕೋತ್ತರ ಪದವಿ (ಎಲ್ಎಲ್ಎಂ) ಕೋರ್ಸ್ಗಳಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.
CLAT ಎರಡು ಗಂಟೆಗಳ ಸುದೀರ್ಘ ಪರೀಕ್ಷೆಯಾಗಿದ್ದು, ಒಟ್ಟು 150 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪದವಿಪೂರ್ವ ಮತ್ತು ಸ್ನಾತಕೋತ್ತರ ಹಂತದ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಪರೀಕ್ಷೆಯಲ್ಲಿ ಕನಿಷ್ಠ ಶೇಕಡಾ 40 ಅಂಕಗಳನ್ನು ಪಡೆಯಬೇಕಿರುತ್ತದೆ. . ಕಾಯ್ದಿರಿಸಿದ ವರ್ಗದ ಅಭ್ಯರ್ಥಿಗಳಿಗೆ ಕಟ್-ಆಫ್ ನಿಯಮಗಳ ಪ್ರಕಾರ ಶೇಕಡಾ 35 ಅಂಕಗಳನ್ನು ಪಡೆಯಬೇಕಿರುತ್ತದೆ.

ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://consortiumofnlus.ac.in/ ಗೆ ಭೇಟಿ ನೀಡಿ.
ಸ್ಟೆಪ್ 2: ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಕೇಳಲಾಗಿರವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬಹುದು.
ಅಭ್ಯರ್ಥಿಗಳು ನೇರವಾಗಿದ ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











