ಇಂದು ಬೆಳಿಗ್ಗೆ 11 ಗಂಟೆಗೆ ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಪ್ರಮಾಣವಚನವನ್ನು ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕಾರ ಮಾಡಿದ ನಂತರ ಸುದ್ದಿಗೋಷ್ಠಿ ನಡೆಸಿದ ಅವರು, ಮೊದಲ ದಿನವೇ 4 ಬಂಪರ್ ಘೋಷಣೆಗಳನ್ನು ಮಾಡಿದ್ದಾರೆ. ಅದರಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿಶೇಷ ಯೋಜನೆಯನ್ನು ಪ್ರಕಟಿಸಿದ್ದಾರೆ.
ರೈತರ ಮಕ್ಕಳಿಗೆ ಹೊಸ ವಿದ್ಯಾರ್ಥಿವೇತನ ಯೋಜನೆಯನ್ನು ಜಾರಿಗೊಳಿಸುವುದಾಗಿ ಅವರು ಹೇಳಿದ್ದಾರೆ. ರೈತರ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗದಿರಲು ಹಾಗೂ ಶಿಕ್ಷಣ ಸಾಲವನ್ನು ತಪ್ಪಿಸುವ ನಿಟ್ಟಿನಲ್ಲಿ ಪ್ರತಿವರ್ಷ 1,000 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಅನುದಾನ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
For Quick Alerts
For Daily Alerts
English summary
Karnataka cm basavaraj bommai announced 4 bumper gifts on first day.