Karnataka Degree Collges Reopen Date: ಅಕ್ಟೋಬರ್ 1 ರಿಂದ ತರಗತಿ ಆರಂಭ: ಡಿಸಿಎಂ ಹೇಳಿಕೆ

ಸೆಪ್ಟೆಂಬರ್ 1 ರಿಂದ ಪದವಿ ಕಾಲೇಜುಗಳ ಆನ್ ಲೈನ್ ತರಗತಿಗಳು ಆರಂಭವಾಗುತ್ತಿದ್ದು, ಅಕ್ಟೋಬರ್ 1 ರಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

 

ಕರ್ನಾಟಕದಲ್ಲಿ ಕಾಲೇಜು ಆರಂಭ ಯಾವಾಗ? ಪ್ರಶ್ನೆಗೆ ಕೊನೆಗೂ ಸಿಕ್ಕಿದೆ ಉತ್ತರ

ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭಿಸುವುದರ ಬಗ್ಗೆ ಇನ್ನೂ ಮಾರ್ಗಸೂಚಿ ಬಂದಿಲ್ಲ, ಆದರೆ ಸೆಪ್ಟೆಂಬರ್ ತಿಂಗಳಲ್ಲಿ ಅಂತಿಮ ವರ್ಷದ ಪದವಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

ಸರ್ಕಾರವು ಸೆಪ್ಟೆಂಬರ್ 1 ರಿಂದ ಆನ್‌ಲೈನ್ ತರಗತಿಗಳನ್ನು ನಡೆಸಲು ನಿರ್ಧರಿಸಿದೆ. ತದನಂತರ ಸೆಪ್ಟೆಂಬರ್ 1 ರಿಂದ ನೇರ ತರಗತಿಗಳು ಆರಂಭವಾಗಲಿವೆ. ಇದರ ಹಿನ್ನೆಲೆಯಲ್ಲಿ ಯುಜಿಸಿ ಮಾರ್ಗಸೂಚಿಯಂತೆ ರಾಜ್ಯ ಸರಕಾರ ಎಲ್ಲ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೇಂದ್ರ ಸರಕಾರದ ಆದೇಶ ಬಂದ ನಂತರ ಈ ನಿಟ್ಟಿನಲ್ಲಿ ರಾಜ್ಯವು ಕಾರ್ಯೋನ್ಮುಖವಾಗಲಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದ್ದಾರೆ.

ಶೈಕ್ಷಣಿಕ ವರ್ಷದ ಆರಂಭದ ಜೊತೆಯಲ್ಲಿಯೇ ಅಂತಿಮ ವರ್ಷದಲ್ಲಿರುವ ಎಲ್ಲ ಪದವಿ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಜೊತೆಗೆ ಬ್ಯಾಕ್ ಲಾಗ್ ಉಳಿಸಿಕೊಂಡಿರುವ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸಲಾಗುವುದು. ಯಾವುದೇ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು ಎಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಡಿಸಿಎಂ ಸ್ಪಷ್ಟಪಡಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
We have a question when colleges will reopen? Finally we got an answer. Colleges will start from october 1 said by DCM ashwath narayan.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X