ದೇಶದೆಲ್ಲೆಡೆ ಹಬ್ಬುತ್ತಿರುವ ಕೊರೋನಾ ಭೀತಿಯಿಂದಾಗಿ ಘೋಷಿಸಲಾದ ಲಾಕ್‌ಡೌನ್‌ನಿಂದಾಗಿ ಮುಂದೂಡಲಾಗಿದ್ದ ಕಾಮೆಡ್-ಕೆ ಪ್ರವೇಶ ಪರೀಕ್ಷೆಯ ದಿನಾಂಕವನ್ನು ಪ್ರಕಟ ಮಾಡಲಾಗಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಲು 2020ನೇ ಸಾಲಿನ 'ಕಾಮೆಡ್-ಕೆ' ಆನ್‌ಲೈನ್ ಪ್ರವೇಶ ಪರೀಕ್ಷೆಯನ್ನು ಜುಲೈ 25 ರ ಶನಿವಾರದಂದು ನಡೆಸಲು ನಿರ್ಧರಿಸಲಾಗಿದೆ.
ಕಾಮೆಡ್-ಕೆ ಪರೀಕ್ಷೆಗೆ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಜೂನ್ 14 ರಿಂದ ಜೂನ್ 16 ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದ್ದು, ಅರ್ಜಿಗಳ ತಿದ್ದುಪಡಿಗೆ ಜೂನ್ 18 ರಿಂದ 21 ರವರೆಗೆ ಕಾಲಾವಕಾಶ ನೀಡಲಾಗಿದೆ.
ಕಾಮೆಡ್ ಕೆ ಪರೀಕ್ಷೆ ಸುಲಭವಾಗಿರಬೇಕೆ? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ
ಈ ಮುಂಚೆ ಕಾಮೆಡ್-ಕೆ ಅಂಡರ್ ಗ್ರಾಜುಯೇಟ್ ಪ್ರವೇಶ ಪರೀಕ್ಷೆಯನ್ನು (ಯುಜಿಇಟಿ) ಮೇ 10 ರಂದು ನಡೆಸುವುದುದಾಗಿ ತಿಳಿಸಿತ್ತು. ಆದರೆ ಕೊರೋನಾದಿಂದ ಉಂಟಾದ ಲಾಕ್‌ಡೌನ್ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಜೂನ್ 27ಕ್ಕೆ ಮುಂದೂಡಲಾಗಿತ್ತು. ಆದರೆ ಈಗ ಲಾಕ್‌ಡೌನ್ ವಿಸ್ತರಣೆಯಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮನವಿಗೆ ಓಗೊಟ್ಟು ಜುಲೈ 25ರಂದು ಪರೀಕ್ಷೆಯನ್ನು ನಡೆಸುವುದಾಗಿ ತಿಳಿಸಿದೆ.
ಖಾಸಗಿ ಕಾಲೇಜುಗಳಲ್ಲಿ ವೃತ್ತಿಪರ ಶಿಕ್ಷಣ ತೆಗೆದುಕೊಳ್ಳುವವರಿಗಾಗಿ ಕಾಮೆಡ್ ಕೆ ಪರೀಕ್ಷೆ