COMEDK UGET Admit Card 2021: ಕಾಮೆಡ್‌ಕೆ ಯುಜಿಇಟಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಕಾಮೆಡ್‌ಕೆ ಯುಜಿಇಟಿ 2021 ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕಾಮೆಡ್ ಕೆ ಯುಜಿಇಟಿ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಕಾಮೆಡ್‌ಕೆ ಯುಜಿಇಟಿ ಕರ್ನಾಟಕ ವೃತ್ತಿಪರ ಕಾಲೇಜುಗಳ ಪ್ರತಿಷ್ಠಾನದ ಸದಸ್ಯ ಸಂಸ್ಥೆಗಳಲ್ಲಿ ಎಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಲಾಗುವ ಆನ್‌ಲೈನ್ ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿದೆ.

ಕಾಮೆಡ್‌ಕೆ ಯುಜಿಇಟಿ 2021 ಪರೀಕ್ಷೆಯನ್ನು ಸೆಪ್ಟೆಂಬರ್ 14,2021ರಂದು ವಿವಿಧ ಕೇಂದ್ರಗಳಲ್ಲಿ ನಿಗದಿಪಡಿಸಲಾಗಿದೆ. ಪರೀಕ್ಷೆಯು ಎರಡು ಶಿಫ್ಟ್‌ಗಳಲ್ಲಿ ನಡೆಯಲಿದ್ದು ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 12 ಮತ್ತು ಮಧ್ಯಾಹ್ನ 2:30 ರಿಂದ 5:30 ರವರೆಗೆ ನಡೆಯಲಿದೆ. ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಸೆಪ್ಟೆಂಬರ್ 17, 2021 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಈ ಮೊದಲು ಪರೀಕ್ಷೆಯನ್ನು ಜೂನ್ 20 ರಂದು ನಡೆಸಲು ನಿರ್ಧರಿಸಲಾಗಿತ್ತು ಆದರೆ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಮುಂದೂಡಲಾಗಿತ್ತು. ಈ ಪರೀಕ್ಷೆಯ ಪ್ರವೇಶ ಪತ್ರವನ್ನು ಆಗಸ್ಟ್ ೩೦ರಂದು ಪ್ರಕಟಿಸಲಾಗಿದ್ದು, ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಸೆಪ್ಟೆಂಬರ್ 13,2021ರ ವರೆಗೆ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ.

ಕಾಮೆಡ್‌ಕೆ ಯುಜಿಇಟಿ 2021 ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.comedk.org/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ
ಸ್ಟೆಪ್ 4: ಅಲ್ಲಿ ನಿಮ್ಮ ಅರ್ಜಿ ಸಂಖ್ಯೆ ಮತ್ತು ಪಾಸ್‌ವರ್ಡ್ ನಮೂದಿಸಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕಿರುತ್ತದೆ. ಜೊತೆಗೆ ಅಗತ್ಯ ದಾಖಲೆಗಳನ್ನು ಒಯ್ಯುವುದು ಒಳಿತು.

ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

ಪರೀಕ್ಷಾ ಮಾದರಿ :

COMEDK UGET-2021 ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)ಇದಾಗಿದ್ದು, ಆನ್‌ಲೈನ್ ಮೋಡ್‌ನಲ್ಲಿ ಮಾತ್ರ ನಡೆಸಲಾಗುವುದು ಮತ್ತು ಕಾಮೆಡ್‌ಕೆ ನ ಸದಸ್ಯ ಸಂಸ್ಥೆಗಳಲ್ಲಿ ಬಿಇ ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಯಸುವ ಎಲ್ಲಾ ಅಭ್ಯರ್ಥಿಗಳಿಗೆ ಕಡ್ಡಾಯವಾಗಿದೆ. ಪ್ರವೇಶ ಪರೀಕ್ಷೆಯು 10+2 /11 ನೇ ಮತ್ತು 12 ನೇ ಎಸ್‌ಟಿಡಿ / 1 ನೇ ಮತ್ತು 2 ನೇ ಪಿಯುಸಿಯ ಪ್ರಸ್ತುತ ಪಠ್ಯಕ್ರಮವನ್ನು ಆಧರಿಸಿರುತ್ತದೆ. 180 ಬಹು ಆಯ್ಕೆ ಪ್ರಶ್ನೆಗಳು ಅಂದರೆ ಪ್ರತಿ ವಿಷಯಕ್ಕೆ 60 ಪ್ರಶ್ನೆಗಳು-ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ ಇರುತ್ತದೆ. ಒಟ್ಟಾರೆ ೩ ಗಂಟೆ ಅವಧಿಯ ಪರೀಕ್ಷೆ ಇದಾಗಿರುತ್ತದೆ.

More News  

For Quick Alerts
ALLOW NOTIFICATIONS  
For Daily Alerts

English summary
COMEDK UGET 2021 admit card released. Here we are giving steps to download admit card.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+