Karnataka 2nd PUC Result 2021: ಎಸ್‌ಎಸ್‌ಎಲ್‌ಸಿ ಅಂಕಗಳನ್ನೂ ಪರಿಗಣಿಸಿ ಪಿಯುಸಿ ರಿಸಲ್ಟ್ : ಸುರೇಶ್ ಕುಮಾರ್ ಘೋಷಣೆ

ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಎಸ್‌ಎಸ್‌ಎಲ್‌ಸಿ ಅಂಕಗಳ ಪರಿಗಣನೆ

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿದ ಬೆನ್ನಲ್ಲೇ ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಎಸ್‌ಎಸ್‌ಎಲ್‌ಸಿ ಮತ್ತು ಪ್ರಥಮ ಪಿಯುಸಿ ಪರೀಕ್ಷೆಯ ಅಂಕಗಳನ್ನು ಪರಿಗಣಿಸಬೇಕು ಎಂದು ಸಚಿವರು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿರುವುದಾಗಿ ಹಾಗೂ ಪ್ರಥಮ ಪಿಯುಸಿ ಫಲಿತಾಂಶದ ಆಧಾರದ ಮೇಲೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸುವುದಾಗಿ ಸಚಿವರು ಘೋಷಿಸಿದ್ದರು. ಇದರ ಬೆನ್ನಲೇ ಇಂದು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅವರುಗಳ ಪರೀಕ್ಷಾ ಫಲಿತಾಂಶವು ಇನ್ನಷ್ಟು ಸಮಗ್ರವಾಗಲು ಹಾಗೂ ಹೆಚ್ಚು ನ್ಯಾಯಯುತವಾಗುವ ದಿಸೆಯಲ್ಲಿ ಮಹತ್ವದ ಪ್ರಕಟಣೆ ಹೊರಡಿಸಿದ್ದಾರೆ.

2020-21ನೇ ಸಾಲಿನಲ್ಲಿ ದಾಖಲಾಗಿರುವ ದ್ವಿತೀಯ ಪಿಯುಸಿ ಹೊಸ ವಿದ್ಯಾರ್ಥಿಗಳ ಫಲಿತಾಂಶವನ್ನು ಘೋಷಿಸುವಾಗ ಅವರು ಪ್ರಥಮ ಪಿಯುಸಿಯಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವತಿಯಿಂದ ಅಂಕಿ ಅಂಶಗಳನ್ನು ಪಡೆದು ಮಾಸಾಂತ್ಯಕ್ಕೆ ಗ್ರೇಡಿಂಗ್ ಫಲಿತಾಂಶಗಳನ್ನು ಘೋಷಿಸುವ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ತಿಳಿಸಿದ್ದಾರೆ.

More News  

For Quick Alerts
ALLOW NOTIFICATIONS  
For Daily Alerts

English summary
Primary and secondary education Minister S. Suresh Kumar has asked the Department of Preuniversity Education to consider the SSLC marks as well as first PU examination marks while evaluating second PU students. II PU exams were cancelled on Friday.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+