ನಾಳೆಯಿಂದ ಕರ್ನಾಟಕ ಬಂದ್: ಶಾಲಾ ಕಾಲೇಜು ಮತ್ತು ವಿಶ್ವವಿದ್ಯಾನಿಲಯಗಳಿಗೆ ಒಂದು ವಾರ ರಜೆ

ಕರ್ನಾಟಕದಲ್ಲಿ ಕೊರೊನಾ ವೈರಸ್ ಬಗ್ಗೆ ಆತಂಕ ಹೆಚ್ಚಾಗಿದ್ದು, ನಾಳೆಯಿಂದ ಒಂದು ವಾರಗಳ ಕಾಲ ಶಾಲಾ ಕಾಲೇಜು, ವಿದ್ಯಾಲಯಗಳಿಗೂ ರಜೆಯನ್ನು ಘೋಸಿಸಿದ ಮುಖ್ಯಮಂತ್ರಿ ಸಿ.ಎಂ ಯಡಿಯೂರಪ್ಪ.

ಕೊರೊನಾ: ನಾಳೆಯಿಂದ ಕರ್ನಾಟಕ ಬಂದ್

ಕೊರೊನಾ ವೈರಸ್‌ಗೆ ಸಂಬಂಧಪಟ್ಟಂತೆ ಸಿಎಂ ಯಡಿಯೂರಪ್ಪ ಇಂದು ವಿಧಾನಸೌಧದಲ್ಲಿ ಆರೋಗ್ಯ ಸಚಿವರು, ಅಧಿಕಾರಿಗಳು ಮತ್ತು ವೈದ್ಯರು ಜೊತೆ ತುರ್ತು ಸಭೆ ನಡೆಸಿದ್ದು, ಕೊರೊನಾ ವೈರಸ್ ಹೆಚ್ಚು ಹರಡುತ್ತಿದ್ದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಒಂದು ವಾರಗಳ ಕಾಲ ಕರ್ನಾಟಕ ಬಂದ್ ಮಾಡಲು ಈ ಸಭೆಯಲ್ಲಿ ಸಿಎಂ ತಿಳಿಸಿದ್ದಾರೆ.

ಎಲ್ಲಾ ಮಾಲ್‌ಗಳು, ಸಿನಿಮಾ ಚಿತ್ರಮಂದಿರಗಳು ಬಂದ್:

ಎಲ್ಲಾ ಮಾಲ್‌ಗಳು, ಸಿನಿಮಾ ಚಿತ್ರಮಂದಿರಗಳು ಬಂದ್:

ರಾಜ್ಯಾದ್ಯಂತ ಎಲ್ಲ ಮಾಲ್‌ಗಳು, ಸಿನಿಮಾ ಚಿತ್ರಮಂದಿರಗಳು, ಪಬ್, ಕ್ಲಬ್, ಮದುವೆ ಸಮಾರಂಭ, ಮೇಳ, ಬಾರ್ ಮತ್ತು ರೆಸ್ಟೋರೆಂಟ್, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ರಾಜ್ಯದ ಎಲ್ಲ ವಿಶ್ವ ವಿದ್ಯಾಲಯಗಳಿಗೂ ರಜೆ ನೀಡುವಂತೆ ಸೂಚಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬದಲಾವಣೆ ಇಲ್ಲ:

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬದಲಾವಣೆ ಇಲ್ಲ:

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಈ ಹಿಂದೆ ನಿಗದಿಯಾಗಿರುವ ವೇಳಾಪಟ್ಟಿಯಂತೆ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಜೊತೆಗೆ ಮಕ್ಕಳಿಗೆ ಬೇಸಿಗೆ ಶಿಬಿರ ನಡೆಸದಂತೆ ಕೂಡ ಸೂಚನೆ ನೀಡಲಾಗಿದೆ .ಸರ್ಕಾರಿ ಕಚೇರಿಗಳಲ್ಲಿ ಎಂದಿನಂತೆ ಕೆಲಸಗಳು ನಡೆಯಲಿದೆ. ಒಂದು ವಾರದ ನಂತರ ಪರಿಸ್ಥಿತಿಯನ್ನು ನೋಡಿಕೊಂಡು ತೀರ್ಮಾನ ಮಾಡಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಕೊರೊನಾ ಸೋಂಕಿತ ಸಾವು:

ಕರ್ನಾಟಕದಲ್ಲಿ ಕೊರೊನಾ ಸೋಂಕಿತ ಸಾವು:

ಕರ್ನಾಟಕದಲ್ಲಿ ಈಗಾಗಲೇ ಕೊರೊನಾದಿಂದಾಗಿ ಒಬ್ಬರು ಮೃತಪಟ್ಟಿದ್ದಾರೆ. ಕಲಬುರಗಿ ನಗರದ ನಿವಾಸಿ ಮಹ್ಮದ್ ಹುಸೇನ್ ಸಿದ್ದಿಕಿ ಮಾರ್ಚ್ 10ರಂದು ಮೃತಪಟ್ಟಿದ್ದರು. ಮಾರ್ಚ್ 12ರಂದು ಅವರಿಗೆ ಕೊರೊನಾ ಸೋಂಕು ತಗುಲಿತ್ತು ಎಂದು ವೈದ್ಯಕೀಯ ವರದಿಯು ಸ್ಪಷ್ಟಪಡಿಸಿತ್ತು.

ಮಾರ್ಚ್ 14ರಿಂದಲೇ ರಜೆ:

ಮಾರ್ಚ್ 14ರಿಂದಲೇ ರಜೆ:

ಈ ಹಿನ್ನೆಲೆಯಲ್ಲಿ ಕರ್ನಾಟಕದ ಶಾಲಾ-ಕಾಲೇಜು ಮತ್ತು ವಿಶ್ವವಿದ್ಯಾನಿಲಯಗಳಿಗೆ ಮಾರ್ಚ್ 14ರಿಂದಲೇ ಅನ್ವಯವಾಗುವಂತೆ ರಜೆ ಘೋಷಣೆ ಮಾಡಲಾಗಿದೆ. ಆದರೆ ಪ್ರಸ್ತುತ ನಡೆಯುತ್ತಿರುವ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

For Quick Alerts
ALLOW NOTIFICATIONS  
For Daily Alerts

English summary
karnataka bandh: Due to corona effect one week holiday for schools and colleges
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X