ದೇಶದೆಲ್ಲೆಡೆ ಕೊರೋನಾ ಭೀತಿ ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಲಾಕ್‌ಡೌನ್ ಅವಧಿಯನ್ನು ಏಪ್ರಿಲ್ 30ರ ವರೆಗೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಕೊರೋನಾ ಭೀತಿ ತಿಳಿಯಾದ ಬಳಿಕವೇ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷಾ ದಿನಾಂಕಗಳನ್ನು ನಿಗದಿಪಡಿಸಲಾಗುವುದು ಎಂದು ನಿನ್ನೆಯಷ್ಟೇ ಫೇಸ್‌ಬುಕ್ ಲೈವ್ ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದರು. ಆದರೆ ಇಂದು ಲಾಕ್‌ಡೌನ್ ಅವಧಿಯನ್ನು ಏಪ್ರಿಲ್ 30ರ ವರೆಗೆ ವಿಸ್ತರಿಸಲಾಗಿದ್ದು, ಅಲ್ಲಿಯವರೆಗೂ ಯಾವುದೇ ಪರೀಕ್ಷೆಗಳು ನಡೆಯುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ.
For Daily Alerts