ಕೊರೋನಾ ಸೋಂಕಿತ ವಿದ್ಯಾರ್ಥಿಗಳಿಗೂ ಸಿಇಟಿ ಪರೀಕ್ಷೆ ಬರೆಯಲು ಅವಕಾಶ

ರಾಜ್ಯಾದ್ಯಂತ 2020ನೇ ಸಾಲಿನ ಸಿಇಟಿ ಪರೀಕ್ಷೆ ಜು.30 ಮತ್ತು 31ರಂದು ನಡೆಯಲಿದೆ. ಈ ಪರೀಕ್ಷೆಗೆ ಕೊರೋನಾ ಸೋಂಕಿತ ವಿದ್ಯಾರ್ಥಿಗಳಿಗೂ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ.

ಕೊರೊನಾ ಸೋಂಕಿತರಿಗೂ ಸಿಇಟಿ ಬರೆಯಲು ಅವಕಾಶ

 

ದೇಶದೆಲ್ಲೆಡೆ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಕೊರೊನಾ ಸೋಂಕು ದೃಢಪಟ್ಟಿರುವ ವಿದ್ಯಾರ್ಥಿಗಳಿಗೂ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.ಇಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗುವುದು. ಇಂತಹ ಪರೀಕ್ಷಾ ಕೇಂದ್ರಗಳಲ್ಲಿ ಆಯಾ ಜಿಲ್ಲೆಗಳ ಜಿಲ್ಲಾ ಆರೋಗ್ಯ ಪ್ರಾಧಿಕಾರ ಹಾಗೂ ಬಿಬಿಎಂಪಿ ಅವಶ್ಯಕ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಆದೇಶಿಸಲಾಗಿದೆ.

ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ಆಗಮಿಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಪರೀಕ್ಷೆ ತೆಗೆದುಕೊಳ್ಳಲು ಅನುಮತಿ ನೀಡಬೇಕು. ಅಂತಹ ವಿದ್ಯಾರ್ಥಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸುವುದರಿಂದ ವಿನಾಯಿತಿ ನೀಡಲಾಗಿದ್ದು, ಇವರಿಗೆ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯುವಂತೆ ವ್ಯವಸ್ಥೆ ಮಾಡುವಂತೆ ಇಲಾಖೆ ತಿಳಿಸಿದೆ.

ಗಮನಿಸಿ:

ಕೋವಿಡ್‌-19 ಸೋಂಕು ಹಿನ್ನೆಲೆಯಲ್ಲಿ ಸುಮಾರು ಎರಡು ಗಂಟೆಗಳ ಮುಂಚಿತವಾಗಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು. ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಪ್ರತಿ ಕೊಠಡಿಯಲ್ಲಿ ಗರಿಷ್ಠ 24 ವಿದ್ಯಾರ್ಥಿಗಳನ್ನು ಕೂರಿಸಲಾಗುವುದು. ಪರೀಕ್ಷಾ ಕೇಂದ್ರದ ಬಳಿ ವಿದ್ಯಾರ್ಥಿಗಳಾಗಲೀ, ಪೋಷಕರಾಗಲೀ ಗುಂಪು ಗೂಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ನೆಗಡಿ, ಕೆಮ್ಮು, ಜ್ವರ, ಗಂಟಲು ಕೆರೆತದಿಂದ ಬಳಲುತ್ತಿರುವ ಅಥವಾ ಕಂಟೈನ್ಮೆಂಟ್‌ ವಲಯದಿಂದ ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಅಂತಹ ಕೊಠಡಿಯಲ್ಲಿ ಪ್ರತಿ ಡೆಸ್ಕ್‌ಗೆ ಒಬ್ಬ ವಿದ್ಯಾರ್ಥಿ ಇರಬೇಕು. ಡೆಸ್ಕ್‌ಗಳ ನಡುವೆ 6 ಅಡಿ ಅಂತರವಿರಬೇಕು. ಇಂತಹ ವಿದ್ಯಾರ್ಥಿಗಳಿಗೆ ಮಾಸ್ಕ್‌ ನೀಡಬೇಕು ಎಂದು ಆದೇಶಿಸಿದೆ. ಒಟ್ಟಾರೆ ಸಕಲ ಸಿದ್ಧತೆಗಳೊಂದಿಗೆ ಸಿಇಟಿ ಪರೀಕ್ಷೆ ನಡೆಸಲು ಇಲಾಖೆ ಸಿದ್ಧವಾಗಿದೆ.

For Quick Alerts
ALLOW NOTIFICATIONS  
For Daily Alerts

English summary
Covid 19 infected student also allowed to write cet exam 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X