CSIR UGC NET 2021 Phase II Admit Card : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಸಿಎಸ್ಐಆರ್ ಯುಜಿಸಿ ಎನ್‌ಇಟಿ 2022ರ ಫೇಸ್ II ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಜೆಆರ್‌ಎಫ್ ಹುದ್ದೆಗಳ ನೇಮಕಾತಿ ನಡೆಸಲಾಗುವ ಪರೀಕ್ಷೆ ಇದಾಗಿದ್ದು, ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಮತ್ತು ಫೇಸ್ II ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಸಿಎಸ್‌ಐಆರ್‌ ಯುಜಿಸಿ ಎನ್‌ಇಟಿ ಫೇಸ್ II ಪ್ರವೇಶ ಪತ್ರ ಔಟ್

CSIR NET 2022 ಫೇಸ್ II ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಪರೀಕ್ಷೆಯ ದಿನದಂದು ತಮ್ಮ ಪ್ರವೇಶ ಪತ್ರದ ಹಾರ್ಡ್ ಪ್ರತಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು, ಫೆಬ್ರವರಿ 15, 16, ಮತ್ತು 17, 2022ರಂದು ನಡೆಸಲಾಗುವುದು. ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವ ಅಭ್ಯರ್ಥಿಗಳು ಅಧಿಕಾರಿಗಳು ವಿಧಿಸಿರುವ ಕೋವಿಡ್-19 ಮಾರ್ಗಸೂಚಿಗಳಿಗೆ ಬದ್ಧರಾಗಿರಬೇಕು. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ.

ಸಿಎಸ್‌ಐಆರ್‌ ಯುಜಿಸಿ ಎನ್‌ಇಟಿ 2022ರ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ https://csirnet.nta.nic.in/WebInfo/Page/Page?PageId=1&LangId=P ಗೆ ಭೇಟಿ ಕೊಡಿ
ಸ್ಟೆಪ್ 2: ಅಭ್ಯರ್ಥಿಗಳಿಗೆ ಹೋಂ ಪೇಜ್ ಲಭ್ಯವಾದಲ್ಲಿ "Download Admit Card" ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಫಾರ್ಮ್ ನಂಬರ್, ಜನ್ಮ ದಿನಾಂಕ ಮತ್ತು ಸೆಕ್ಯುರಿಟಿ ಪಿನ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಸ್ಕ್ರೀನ್ ಮೇಲೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗುವುದು ನಂತರ ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

CSIR NET 2022ರ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವಾಗ ಅವರು ಯಾವುದೇ ಸಮಸ್ಯೆಯನ್ನು ಎದುರಿಸಿದರೆ ಸಹಾಯ ಕೇಂದ್ರ 011 40759000 ಗೆ ಕರೆ ಮಾಡಬಹುದು ಅಥವಾ [email protected] ಗೆ ಮೇಲ್ ಮಾಡಬಹುದು ಎಂಬುದನ್ನು ಅಭ್ಯರ್ಥಿಗಳು ಗಮನಿಸಬೇಕು.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
CSIR UGC NET 2021 phase II admit card released on official website. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+