ಕೌನ್ಸಿಲ್ ಆಫ್ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್( ಸಿಎಸ್‌ಐಆರ್) ಯುಜಿಸಿ ಎನ್‌ಇಟಿ ಜೂನ್ 2019ರ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಜೆಆರ್‌ಎಫ್ ಹುದ್ದೆಗಳ ನೇಮಕಾತಿ ನಡೆಸಲಾಗುವ ಪರೀಕ್ಷೆ ಇದಾಗಿದ್ದು ಆಸಕ್ತ ಅಭ್ಯರ್ಥಿಗಳಿಂದ ಮಾರ್ಚ್ 22,2019 ರೊಳಗೆ ಅರ್ಜಿ ಆಹ್ವಾನಿಸಲಾಗಿತ್ತು.

ಈ ಪರೀಕ್ಷೆಯನ್ನು ತೆಗೆದುಕೊಂಡ ಅಭ್ಯರ್ಥಿಗಳು ಇದೀಗ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಸಿಎಸ್‌ಐಆರ್ ಯುಜಿಸಿ ಎನ್ಇಟಿ ಪರೀಕ್ಷೆಯು ಜೂನ್ 16,2019 ರಂದು ಪೇಪರ್ 1 ಬೆಳಗ್ಗೆ 9 ಗಂಟೆಗೆ ಮತ್ತು ಪೇಪರ್ 2 ಮಧ್ಯಾಹ್ನ 2 ಗಂಟೆಗೆ ಇರುತ್ತದೆ. ಒಟ್ಟಾರೆ ಪರೀಕ್ಷೆಯು 200 ಅಂಕಗಳನ್ನು ಒಳಗೊಂಡಿದ್ದು, ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಬಹುದು.
ಸಿಎಸ್‌ಐಆರ್ ಯುಜಿಸಿ ನೆಟ್ 2019ರ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://www.csirhrdg.res.in/ ಗೆ ಭೇಟಿ ಕೊಡಿ
ಸ್ಟೆಪ್ 2: ಅಭ್ಯರ್ಥಿಗಳಿಗೆ ಹೋಂ ಪೇಜ್ ಲಭ್ಯವಾದಲ್ಲಿ "CSIR-UGC NET EXAM" ಮೇಲೆ ಕ್ಲಿಕ್ ಮಾಡಿ ಅಲ್ಲಿ "Admit Card June 2019" ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "Download the Admit Card of CSIR -UGC NET Exam June 2019" ರ ಮುಂದೆ click here ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಫಾರ್ಮ್ ನಂಬರ್ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಸ್ಕ್ರೀನ್ ಮೇಲೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗುವುದು ನಂತರ ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ.
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕಿರುತ್ತದೆ. ಪರೀಕ್ಷೆಗೆ ಅಗತ್ಯ ವಸ್ತುಗಳ ಜೊತೆಗೆ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ.


Click it and Unblock the Notifications











