CSIR UGC NET June 2021 Admit Card : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಸಿಎಸ್ಐಆರ್ ಯುಜಿಸಿ ಎನ್‌ಇಟಿ ಜೂನ್ 2021ರ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಜೆಆರ್‌ಎಫ್ ಹುದ್ದೆಗಳ ನೇಮಕಾತಿ ನಡೆಸಲಾಗುವ ಪರೀಕ್ಷೆ ಇದಾಗಿದ್ದು ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

 
ಸಿಎಸ್‌ಐಆರ್‌ ಯುಜಿಸಿ ಎನ್‌ಇಟಿ ಪ್ರವೇಶ ಪತ್ರ ಔಟ್

ಸಿಎಸ್‌ಐಆರ್‌ ಯುಜಿಸಿ ಎನ್ಇಟಿ ಪರೀಕ್ಷೆಗೆ ಡಿಸೆಂಬರ್ 3,2021 ರಿಂದ ಜನವರಿ 2,2022ರ ರಾತ್ರಿ 11:50ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಪರೀಕ್ಷೆಯು ಜನವರಿ 29, ಫೆಬ್ರವರಿ 15,16 ಮತ್ತು 17,2022ರಂದು ನಡೆಯಲಿದೆ. ಪರೀಕ್ಷೆಯ ಪ್ರವೇಶ ಪತ್ರ ಪ್ರಕಟವಾಗಿದ್ದು, ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ನೋಡಿ.

ಸಿಎಸ್‌ಐಆರ್‌ ಯುಜಿಸಿ ನೆಟ್ ಜೂನ್ 2021ರ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ https://csirnet.nta.nic.in/WebInfo/Page/Page?PageId=1&LangId=P ಗೆ ಭೇಟಿ ಕೊಡಿ
ಸ್ಟೆಪ್ 2: ಅಭ್ಯರ್ಥಿಗಳಿಗೆ ಹೋಂ ಪೇಜ್ ಲಭ್ಯವಾದಲ್ಲಿ "Download Admit Card" ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಫಾರ್ಮ್ ನಂಬರ್, ಜನ್ಮ ದಿನಾಂಕ ಮತ್ತು ಸೆಕ್ಯುರಿಟಿ ಪಿನ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಸ್ಕ್ರೀನ್ ಮೇಲೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗುವುದು ನಂತರ ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

 

ಪರೀಕ್ಷೆಯ ವಿವರ:

ಪರೀಕ್ಷಾ ವಿಧಾನ: ಕಂಪ್ಯೂಟರ್ ಆಧಾರಿತ ಪರೀಕ್ಷೆ
ಪರೀಕ್ಷೆಯ ಅಂಕಗಳು: ಒಟ್ಟು 200
ಪತ್ರಿಕೆ: 2 ಪ್ರಶ್ನೆ ಪತ್ರಿಕೆಗಳು
ಸಮಯ: ಒಟ್ಟು 3 ಗಂಟೆಗಳ ಅವಧಿ

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
CSIR UGC NET june 2021 admit card released on official website. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X