CSIR UGC NET: 2020ರ ಜೂನ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಧಿ ವಿಸ್ತರಣೆ

ಯುಜಿಸಿ ಎನ್ಇಟಿ 2020ರ ಜೂನ್ ಪರೀಕ್ಷೆಯ ಅಧಿಕೃತ ಅಧಿಸೂಚನೆಯನ್ನು ಈಗಾಗಲೇ ಸಿಎಸ್ಐಆರ್ ಪ್ರಕಟ ಮಾಡಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮೇ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸಿಎಸ್ಐಆರ್ ಯುಜಿಸಿ ಎನ್ಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ

ಭೌತಶಾಸ್ತ್ರ, ಜೀವಶಾಸ್ತ್ರ, ಮ್ಯಾಥಮೆಟಿಕಲ್ ಸೈನ್ಸ್ ವಿಷಯ ಸೇರಿದಂತೆ ವಿವಿಧ ವಿಷಯಗಳಿಗೆ ಸಿಎಸ್ಐಆರ್-ದಿ ಕೌನ್ಸಿಲ್ ಆಫ್ ಸೈನ್ಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರೀಸರ್ಚ್ ಹಾಗೂ ಯುಜಿಸಿ ಜಂಟಿಯಾಗಿ ಎನ್ಇಟಿ ಪರೀಕ್ಷೆಯನ್ನು ನಡೆಸುತ್ತದೆ.

ಸಿಎಸ್ಐಆರ್ ಮಾರ್ಚ್ 16 ರಿಂದ ಏಪ್ರಿಲ್ 15,2020ರೊಳಗೆ ಅರ್ಜಿ ಸಲ್ಲಿಸಲು ಸೂಚಿಸಿತ್ತು. ಆದರೆ ತದನಂತರದಲ್ಲಿ ದೇಶದೆಲ್ಲೆಡೆ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮೇ 15,2020ರ ವರೆಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿತ್ತು. ಆದರೆ ಮತ್ತೊಮ್ಮೆ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದ್ದು, ಅರ್ಜಿ ಸಲ್ಲಿಸದಿರುವ ಅಭ್ಯರ್ಥಿಗಳು ಮೇ 31ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ಅರ್ಜಿ ಶುಲ್ಕ:

ಸಾಮಾನ್ಯ /ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ 1000/-ರೂ ಓಬಿಸಿ ಅಭ್ಯರ್ಥಿಗಳಿಗೆ ರೂ.500/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳಿಗೆ ರೂ.250/-ರೂ ಇರುತ್ತದೆ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಮೇ 31,2020ರೊಳಗೆ ಪಾವತಿಸಬಹುದಾಗಿರುತ್ತುದೆ.

ಅರ್ಜಿ ಸಲ್ಲಿಸುವುದು ಹೇಗೆ?:

ಈ ಕೆಳಗಿನ ಸ್ಟೆಪ್ಸ್ ಮೂಲಕ ಎನ್ಇಟಿ 2020 ಜೂನ್ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು.
ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://csirnet.nta.nic.in/webinfo/public/home.aspx ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ ನಲ್ಲಿ ಆನ್ಲೈನ್ ಅರ್ಜಿ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕೇಳಲಾಗಿರುವ ಮಾಹಿತಿ ಭರ್ತಿ ಮಾಡಿ
ಸ್ಟೆಪ್ 4: ನಂತರ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 5: ಮುಂದಿನ ರೆಫರೆನ್ಸ್ ಗಾಗಿ ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
CSIR again extended application date for ugc net june 2020 exam. Interested candidates can apply before May 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+