2017 ನೇ ಸಾಲಿನ ಪದವಿ/ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ "ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ" ಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸರಾಸರಿ ಶೇ.70 ಮತ್ತು ಅದಕ್ಕಿಂತ ಹೆಚ್ಚು ಅಂಕಗಳಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿ ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅನುದಾನ ಲಭ್ಯತೆಗೆ ಅನುಗುಣವಾಗಿ ಮೆರಿಟ್ ಮತ್ತು ಮೀಸಲಾತಿ ಅನ್ವಯ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಹತೆಗಳು
- ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಕನಿಷ್ಠ 7 ವರ್ಷ ಕರ್ನಾಟಕದಲ್ಲಿ ವ್ಯಾಸಂಗ ಮಾಡಿರತಕ್ಕದ್ದು.
- ವಿದ್ಯಾರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಅಥವಾ 3ಬಿ ಗೆ ಸೇರಿರಬೇಕು.
- ಸರ್ಕಾರಿ/ಮಾನ್ಯತೆ ಪಡೆದ ಅನುದಾನಿತ/ಅನುದಾನ ರಹಿತ ಕಾಲೇಜು/ವಿಶ್ವವಿದ್ಯಾಲಯಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ವೃತ್ತಿಪರ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗವನ್ನು ಕರ್ನಾಟಕ ರಾಜ್ಯದಲ್ಲಿಯೇ ಮಾಡಿರಬೇಕು.
- ಸಮಾನ ಕೋರ್ಸ್ ಗಳಿಗೆ ಸಂಬಂಧಿಸಿದಂತೆ ಅರ್ಹತೆಯನ್ನಾಧರಿಸಿ ಒಬ್ಬ ವಿದ್ಯಾರ್ಥಿಗೆ ಒಂದು ಬಾರಿ ಮಾತ್ರ ಈ ಸೌಲಭ್ಯವನ್ನು ನೀಡಲಾಗುವುದು.
- ವಿದ್ಯಾರ್ಥಿಯು ಸೇರಿದಂತೆ ಕುಟಂಬದ ಒಟ್ಟು ವಾರ್ಷಿಕ ಆದಾಯಮಿತಿ: ಪ್ರ-1-ರೂ. 2.50ಲಕ್ಷ, ಪ್ರ-2ಎ,3ಎ,3 ಬಿ- ರೂ.1.00ಲಕ್ಷ
ಪುರಸ್ಕಾರ ಮೊತ್ತದ ವಿವರ

ಅರ್ಜಿ ಸಲ್ಲಿಕೆ
ಅರ್ಜಿಗಳನ್ನು ಅನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಆನ್-ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:20-01-2018
ಎಲ್ಲಾ ದಾಖಲೆಗಳನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ:22-01-2018
ಸಹಾಯವಾಣಿ ಸಂಖ್ಯೆ: 080-65970004
ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
For Quick Alerts
For Daily Alerts
English summary
Applications have been invited for "D. Devaraju Raju Pratibha Puraskar" for students who have completed the Bachelor's / Master's degree and professional degree / professional postgraduate degree in 2017.
Story first published: Thursday, January 11, 2018, 15:25 [IST]


Click it and Unblock the Notifications











