ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಸೆ.20 ಕೊನೆಯ ದಿನ

"ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ವಿನಾಯಿತಿ", ವಿದ್ಯಾಸಿರಿ-"ಊಟ ಮತ್ತು ವಸತಿ ಸಹಾಯ ಯೋಜನೆ" ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ.

ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2017-18 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ "ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ವಿನಾಯಿತಿ", ವಿದ್ಯಾಸಿರಿ-"ಊಟ ಮತ್ತು ವಸತಿ ಸಹಾಯ ಯೋಜನೆ" ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ.

ಈ ಹಿಂದೆ ಸೆಪ್ಟೆಂಬರ್ 10 ಅರ್ಜಿ ಸಲ್ಲಿಸಲು ಕೊನೆಯ ದಿನವೆಂದು ತಿಳಿಸಲಾಗಿತ್ತು. ಆದರೆ ಈಗ ಸೆಪ್ಟೆಂಬರ್ 20 ರವರೆಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿವೇತನಕ್ಕೆ ಅರ್ಜಿ

ವಿದ್ಯಾರ್ಹತೆ

ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ತಾಂತ್ರಿಕ ಕೋರ್ಸುಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ವಾರ್ಷಿಕ ಆದಾಯ ಮಿತಿ

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯವು ಈ ಕೆಳಗಿನಂತಿರಬೇಕು.

  • ವರ್ಗ-1 ರ ವಿದ್ಯಾರ್ಥಿಗಳಿಗೆ: ರೂ.2.50 ಲಕ್ಷ ಮೀರಿರಬಾರದು
  • ವರ್ಗ-2ಎ,3ಎ,3ಬಿ ವಿದ್ಯಾರ್ಥಿಗಳಿಗೆ ರೂ.1 ಲಕ್ಷ ಮೀರಿರಬಾರದು

ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳಿಗೆ ರೂ.1.500/- ರಂತೆ ಶೈಕ್ಷಣಿಕ ವರ್ಷದ 10 ತಿಂಗಳಿಗೆ ಒಟ್ಟು ರೂ.15000/-ಗಳ ಸಹಾಯಧನವನ್ನು ಇತರೆ ನಿಬಂಧನೆಗೊಳಪಟ್ಟು ಅವರ ಯಾವುದಾದರು ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಇರುವ ಬ್ಯಾಂಕಿನಲ್ಲಿ ತೆರದಿರುವ ಬ್ಯಾಂಕ್ ಖಾತೆಗೆ ಆನ್-ಲೈನ್ (ಆರ್.ಟಿ.ಜಿ.ಎಸ್) ಮೂಲಕ ಜಮಾ ಮಾಡಲಾಗುವುದು.

ಅರ್ಜಿ ಸಲ್ಲಿಕೆ

ವಿದ್ಯಾರ್ಥಿವೇತನ ಬಯಸುವ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಸೂಕ್ತ ದಾಖಲೆಗೊಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡುತಕ್ಕದ್ದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-09-2017

ಅರ್ಜಿ ಸಲ್ಲಿಸಲು ಹೊಂದಿರಬೇಕಾದ ದಾಖಲೆಗಳು

  • ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಪ್ರತಿ
  • ಹಿಂದಿನ ತರಗತಿಯಲ್ಲಿ ಅಭ್ಯಾಸ ಮಾಡಿದ ಅಂಕ ಪಟ್ಟಿಯ ಪ್ರತಿ
  • ಎಸ್ ಎಸ್ ಎಲ್ ಸಿ ಅಂಕಪಟ್ಟಿಯ ಪ್ರತಿ
  • ರಾಷ್ಟ್ರೀಕೃತ ಬ್ಯಾಂಕ್ ಖಾತೆ ಪುಸ್ತಕದ ಪ್ರತಿ
  • ಆಧಾರ್ ಕಾರ್ಡ್ ಪ್ರತಿ
  • ರೇಷನ್ ಕಾರ್ಡ್ ಪ್ರತಿ
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  • ಪ್ರಸಕ್ತ ವರ್ಷದ ದಾಖಲಾತಿ ಸಂಖ್ಯೆ, ಕಾಲೇಜು ಪ್ರಾರಂಭವಾದ ದಿನಾಂಕ
  • ಶಾಲೆಯಿಂದ ಕಾಲೇಜಿಗೆ ಇರುವ ಅಂತರ (ಕಿ.ಮೀ)

ಹೆಚ್ಚಿನ ಮಾಹಿತಿಗಾಗಿ backwardclasses.kar.nic.in ಗಮನಿಸಿ

More News  

For Quick Alerts
ALLOW NOTIFICATIONS  
For Daily Alerts

English summary
Department of backward classes welfare extended the application date of post metric scholarships. students should apply before September 20
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+