
ದೂರದರ್ಶನ ಚಂದನ ವಾಹಿನಿಯಲ್ಲಿ 1 ರಿಂದ 10ನೇ ತರಗತಿಯವರೆಗೆ ಜುಲೈ 5 ರಿಂದ ವೀಡಿಯೋ ಪಾಠಗಳನ್ನು ಪ್ರಸಾರ ಮಾಡಲಿದ್ದು, ಕರ್ನಾಟಕ ಸರ್ಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕೃತ ವೆಬ್‌ಸೈಟ್ ನಲ್ಲಿ ವೇಳಾಪಟ್ಟಿಯ ಬಿಡುಗಡೆ ಮಾಡಲಾಗಿದೆ. ಈ ತರಗತಿಗಳು ಬೆಳಗಿನ 8 ಗಂಟೆಯಿಂದ ಸಂಜೆ 4ರವರೆಗೆ ನಡೆಯಲಿದ್ದು, ತರಗತಿವಾರು ವೇಳಾಪಟ್ಟಿಯನ್ನು ಇಲ್ಲಿ ನೀಡಲಾಗಿದೆ.
ಕೋವಿಡ್ ಹಿನ್ನೆಲೆಯಲ್ಲಿ 2021-22ನೇ ಸಾಲಿನಲ್ಲಿ ಶಾಲೆಗಳು ನಿಗದಿತ ಸಮಯಕ್ಕೆ ಪ್ರಾರಂಭವಾಗದಿರುವುದರಿಂದ ಕಳೆದ ಸಾಲಿನಂತೆ ದೂರದರ್ಶನ ಚಂದನ ವಾಹಿನಿಯ ಮೂಲಕ ಜುಲೈ 5,2021 ರಿಂದ ವೀಡಿಯೋ ಪಾಠಗಳನ್ನು 1 ರಿಂದ 10ನೇ ತರಗತಿಯವರೆಗೆ ಪ್ರಸಾರ ಮಾಡಲು ಇಲಾಖೆ ಕ್ರಮವಹಿಸಿದೆ.
ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ಸದರಿ ಕಾರ್ಯಕ್ರಮವನ್ನು ವೀಕ್ಷಿಸಿ ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಹಾಗೂ ಕಾಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಕರು, ಪೋಷಕರು ಹಾಗೂ ಸಮುದಾಯ ಸಹಕರಿಸಬೇಕೆಂದು ಈ ಮೂಲಕ ಕೋರಿದೆ.
For Quick Alerts
For Daily Alerts
English summary
DD chandana channel going to telecast classes for 1 to 10th standard from july 5. Here is the time table.


Click it and Unblock the Notifications