ದೆಹಲಿ ಹೈ ಕೋರ್ಟ್ ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ ಹುದ್ದೆಗಳಿಗೆ ನಡೆಸಲಾಗುವ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ . ದೆಹಲಿ ಹೈ ಕೋರ್ಟ್ 57 ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷೆಯನ್ನು ಎದುರಿಸಲು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಇದೀಗ ಡೌನ್ ಲೋಡ್ ಮಾಡಿಕೊಳ್ಳಬದುದಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ದೆಹಲಿ ಹೈ ಕೋರ್ಟ್ ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ
ಸ್ಟೆಪ್ 1: ದೆಹಲಿ ಹೈ ಕೋರ್ಟ್ ನ ಅಧಿಕೃತ ವೆಬ್ ಸೈಟ್ http://delhihighcourt.nic.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ Public Notices ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು Job Openings ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: "Download Admit Card for Preliminary Examination Sr Personal Assistant Examination 2019" ನ Application form ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ನಂತರ ಹೊಸ ಪುಟ ತೆರೆಯುತ್ತದೆ ಅಲ್ಲಿ ನೀಡಲಾಗಿರುವ Admit Card ನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6: ನಂತರ ನಿಮ್ಮ ಅಪ್ಲಿಕೇಶನ್ ನಂ ,ಜನ್ಮ ದಿನಾಂಕ ಮತ್ತು ಇ-ಮೇಲ್ ಐಡಿ ನೀಡಿ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 7: ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











