ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಐಎಎಸ್,ಕೆಎಎಸ್ ಮತ್ತು ಬ್ಯಾಂಕಿಂಗ್ ಪ್ರೊಬೆಷನರಿ ಅಧಿಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2019-20 ನೇ ಸಾಲಿನಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು, ರಾಜ್ಯದ ಹಿಂದುಳೀದ ವರ್ಗಗಳ ಪ್ರವರ್ಗ-1, 2(ಎ),3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಜುಲೈ 12,2019 ರ ಸಂಜೆ 5:30 ಕೊನೆಯ ದಿನವಾಗಿರುತ್ತದೆ. ಅಭ್ಯರ್ಥಿಗಳು ಈ ಬಗೆಗೆ ಹೆಚ್ಚಿನ ಮಾಹಿತಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಚೆಕ್ ಮಾಡಿಕೊಳ್ಳಬಹುದು.

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ

 

ಅರ್ಹತೆಗಳು ಏನಿರಬೇಕು:

* ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೊಂದು ಪದವಿ ಪಡೆದಿರಬೇಕು.

* ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1,2(ಎ),3(ಎ) ಅಥವಾ 3(ಬಿ)ಗೆ ಸೇರಿರಬೇಕು.

* ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ-

ಪ್ರವರ್ಗ-1ರೂ.4.50 ಲಕ್ಷ
ಪ್ರವರ್ಗ 2(ಎ),3(ಎ) ಮತ್ತು 3(ಬಿ)ರೂ.3.50 ಲಕ್ಷ

ತರಬೇತಿಯ ಅವಧಿ:

* ಐ.ಎ.ಎಸ್ ಪರೀಕ್ಷೆಗಳಿಗೆ 7 ರಿಂದ 9 ತಿಂಗಳ ಅವಧಿಯ ತರಬೇತಿ

* ಕೆ.ಎ.ಎಸ್ ಪರೀಕ್ಷೆಗಳಿಗೆ ಕನಿಷ್ಠ 7 ತಿಂಗಳ ಅವಧಿಯ ತರಬೇತಿ

* ಬ್ಯಾಂಕಿಂಗ್ ಪ್ರೊಬೇಷನರಿ ಆಫೀಸರ್ಸ್ ಪರೀಕ್ಷೆಗಳಿಗೆ ಕನಿಷ್ಟ 2 ತಿಂಗಳ ಅವಧಿಯ ತರಬೇತಿಯನ್ನು ನೀಡಲಾಗುವುದು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12/7/2019

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್‌ http://www.backwardclasses.kar.nic.in/ ಅನ್ನು ಚೆಕ್ ಮಾಡಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 8050770004 (ಕಛೇರಿ ಕಾರ್ಯನಿರ್ವಹಿಸುವ ದಿನಗಳು ಮತ್ತು ಸಮಯದಲ್ಲಿ ಮಾತ್ರ)

For Quick Alerts
ALLOW NOTIFICATIONS  
For Daily Alerts

English summary
Department of backward classes 2019 invited applications for IAS,KAS & Banking exam training
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X