Department Of Backward Classes 2019: NEET ಹಾಗೂ JEE ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಹಾಕಲು ನ.14 ಕೊನೆಯ ದಿನ

2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ NEET ಹಾಗೂ JEE(ಅಡ್ವಾನ್ಸ್ಡ್ ಮತ್ತು ಪ್ರಮುಖ) ಪರೀಕ್ಷಾ ಪೂರ್ವ ತರಬೇತಿಯನ್ನು ನೀಡುತ್ತಿದ್ದು, ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದ್ದು, ಅಭ್ಯರ್ಥಿಗಳು ನವೆಂಬರ್ 14,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

NEET ಹಾಗೂ JEE ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

 

ಆಸಕ್ತ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಗಳನ್ನು ಸಲ್ಲಿಸುವುದು. ಬೇರೆ ಯಾವ ಪ್ರಕಾರಗಳಲ್ಲೂ ಸಲ್ಲಿಸುವ ವಿದ್ಯಾರ್ಥಿಯ ಅರ್ಜಿಯನ್ನಾಗಲಿ ಅಥವಾ ಮನವಿಯನ್ನಾಗಲಿ ಪರಿಗಣಿಸಲಾಗುವುದಿಲ್ಲ.

ತರಬೇತಿ ಪಠ್ಯಕ್ರಮ, ತರಬೇತಿ ಅವಧಿ :

ಪ್ರಥಮ ವರ್ಷದಲ್ಲಿ ತರಬೇತಿಗೆ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಪ್ರಥಮ/10+2 ಹಾಗೂ ದ್ವಿತೀಯ ಪಿಯುಸಿ/10+2 ಸಂಬಂಧಿಸಿದಂತೆ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುವುದು.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಸಾಮಾನ್ಯ ಅರ್ಹತೆ ಮತ್ತು ಸೂಚನೆಗಳು :

ಅರ್ಹತೆಗಳು :

* ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

* ಕರ್ನಾಟಕ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1,2ಎ,3ಎ ಅಥವಾ 3ಬಿಯ ಜಾತಿಗಳಿಗೆ ಸೇರಿರಬೇಕು.

* ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ರೂ.6.00ಲಕ್ಷಗಳು.

ವಿದ್ಯಾರ್ಹತೆ :

* ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸದರಿ ಪರೀಕ್ಷಾ ಪೂರ್ವ ತರಬೇತಿಗಳನ್ನು ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಎಸ್‌.ಎಸ್‌.ಎಲ್‌.ಸಿ/10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.ತರಬೇತಿಗೆ ಎಸ್‌.ಎಸ್‌.ಎಲ್‌.ಸಿ /10ನೇ ತರಗತಿಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ವಯೋಮಿತಿ :

ಅಕ್ಟೋಬರ್ 15,2019ರ ಅನ್ವಯ ವಿದ್ಯಾರ್ಥಿಯ ವಯೋಮಿತಿ 20 ವರ್ಷ ಅಥವಾ ಅದಕ್ಕಿಂತ ಕಡಿಮೆ ಇರಬೇಕು.

ವಿಶೇಷ ಸೂಚನೆ :

ತರಬೇತಿಯನ್ನು ಬೆಂಗಳೂರು ನಗರ, ಬೆಳಗಾವಿ,ಕಲಬುರ್ಗಿ,ಮೈಸೂರು,ದಕ್ಷಿಣ ಕನ್ನಡ ಮತ್ತು ಧಾರವಾಡ ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ನೀಡಲು ಉದ್ಧೇಶಿಸಿದ್ದು, ಇಲ್ಲಿ ತಿಳಿಸಲಾಗಿರುವ ಜಿಲ್ಲಾ ಕೇಂದ್ರಗಳಲ್ಲಿ ಪ್ರಥಮ ಪಿ.ಯು.ಸಿ/10+1 ವ್ಯಾಸಂಗ ಮಾಡುತ್ತಿರುವ (ವಿಜ್ಞಾನ ವಿಭಾಗದಲ್ಲಿ) ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಸದರಿ ಪರೀಕ್ಷಾ ಪೂರ್ವ ತರಬೇತಿಯನ್ನು ಖಾಸಗಿ ಸಂಸ್ಥೆಗಳ ಮೂಲಕ ನೀಡಲಾಗುವುದು. ತರಬೇತಿಯು ಉಚಿತವಾಗಿದ್ದು, ತರಬೇತಿ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತರಬೇತಿ ಭತ್ಯೆ, ಪ್ರಯಾಣ ಭತ್ಯೆ ಹಾಗೂ ಇತರೆ ಯಾವುದೇ ಭತ್ಯೆಯನ್ನು ನೀಡಲಾಗುವುದಿಲ್ಲ.

 

ಅರ್ಜಿ ಸಲ್ಲಿಸಲು ಕೊನೆಯ ದಿನ: 14.11.2019ರ ಸಂಜೆ 5:00ಗಂಟೆ

ಅಧಿಕೃತ ವೆಬ್‌ಸೈಟ್‌: http://backwardclasses.kar.nic.in/BCWDHome.aspx

ಸಹಾಯವಾಣಿ : 080-65970004

ಅಭ್ಯರ್ಥಿಗಳು ಜೆಇಇ ಮತ್ತು ನೀಟ್ ಪರೀಕ್ಷಾ ಪೂರ್ವ ತರಬೇತಿಯ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Department of backward classes 2019-20 invited applications for Pre exam training for neet and jee exams.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X