2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಐ.ಎ.ಎಸ್,ಕೆ.ಎ.ಎಸ್ ಮತ್ತು ಬ್ಯಾಂಕಿಂಗ್ ಪಿ.ಒ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಸೆಪ್ಟೆಂಬರ್ 8,2019ರಂದು ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ.
ಇಲಾಖೆಯು ಐ.ಎ.ಎಸ್,ಕೆ.ಎ.ಎಸ್ ಮತ್ತು ಬ್ಯಾಂಕಿಂಗ್ ಪಿ.ಒ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಜುಲೈ 12,2019ರೊಳಗೆ ಅರ್ಜಿ ಆಹ್ವಾನಿಸಲಾಗಿತ್ತು. ಈ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿದ್ದು, ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.
ಫಲಿತಾಂಶ ಚೆಕ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವಾಲಯದ ಅಧಿಕೃತ ವೆಬ್‌ಸೈಟ್ http://backwardclasses.kar.nic.in/BCWDDeptLinksMainPage.aspx ಗೆ ಭೇಟಿ ನೀಡಿ
ಸ್ಟೆಪ್ 2: ಅಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೋಂ ಪೇಜ್‌ನಲ್ಲಿ 2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಸಾಮಾನ್ಯ ಪರೀಕ್ಷೆಯ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ Result ಮುಂದೆ ಇರುವ View ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಅಭ್ಯರ್ಥಿಗಳು ನಿಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.
ಅಭ್ಯರ್ಥಿಗಳು ಫಲಿತಾಂಶವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ